By : Oneindia Kannada Video Team
Published : January 22, 2018, 11:50

ಮುಖ್ಯ ಚುನಾವಣಾ ಆಯುಕ್ತರಾಗಿ ಓಂ ಪ್ರಕಾಶ್‌ ರಾವತ್‌

ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ಓಂ ಪ್ರಕಾಶ್‌ ರಾವತ್‌ ಅವರನ್ನು ನೇಮಕ ಮಾಡಲಾಗಿದೆ. ಜನವರಿ 23ರಂದು ಅಧಿಕಾರ ಸ್ವೀಕರಿಸಲಿದ್ದಾರೆ, ರಾವತ್‌ ಅವರ ಅವಧಿ ಈ ವರ್ಷದ ಡಿಸೆಂಬರ್‌ನಲ್ಲಿ ಅಂತ್ಯಗೊಳ್ಳಲಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.

ಹಾಲಿ ಮುಖ್ಯ ಚುನಾವಣಾ ಆಯುಕ್ತ(ಸಿಇಸಿ) ಅಚಲ್‌ ಕುಮಾರ್‌ ಜೋತಿ ಅವರ ಅಧಿಕಾರ ಅವಧಿ ಜನವರಿ 22ಕ್ಕೆ ಕೊನೆಗೊಳ್ಳಲಿದೆ. ವಿತ್ತ ಸಚಿವಾಲಯದ ಕಾರ್ಯದರ್ಶಿ ಅಶೋಕ್ ಲಾವಾಸ ಅವರನ್ನು ಚುನಾವಣಾ ಆಯುಕ್ತರಾಗಿ ಕೂಡಾ ನೇಮಿಸಲಾಗಿದೆ.

ಮಧ್ಯಪ್ರದೇಶ ಕೇಡರ್‌ನ 1977ರ ಬ್ಯಾಚಿನ ನಿವೃತ್ತ ಐಎಎಸ್‌ ಅಧಿಕಾರಿಯಾಗಿರುವ ರಾವತ್‌, ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಕಾರ್ಯದರ್ಶಿ ಮತ್ತು ರಕ್ಷಣಾ ಸಚಿವಾಲಯದಲ್ಲಿ ನಿರ್ದೇಶಕ ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಮಧ್ಯಪ್ರದೇಶದ ಅಂದಿನ ಮುಖ್ಯಮಂತ್ರಿ ಬಾಬು ಲಾಲ್ ಗೌರ್ ಅವರ ಮುಖ್ಯ ಕಾರ್ಯದರ್ಶಿಯಾಗಿ 2004ರ ಹಾಗೂ 2006ರಲ್ಲಿ ಕಾರ್ಯನಿರ್ವಹಿಸಿದ್ದರು. 2010ರಲ್ಲಿ ಉತ್ತಮ ಆಡಳಿತಗಾರ ಎಂಬ ಶ್ಲಾಘನೆಯನ್ನು ನೀಡಿ ಪ್ರಧಾನಿ ಸಚಿವಾಲಯದಿಂದ ಗೌರವ ಸ್ವೀಕರಿಸಿದ್ದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!