By: Oneindia Kannada Video Team
Published : December 12, 2017, 04:46

ಪರೇಶ್ ಮೇಸ್ತಾ ಕೇಸ್ : ಶಿರಸಿಯಲ್ಲಿ ಹಿಂಸಾ ರೂಪಕ್ಕೆ ತಿರುಗಿದ ಪ್ರತಿಭಟನೆ

Subscribe to Oneindia Kannada

ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ ಪ್ರಕರಣ ಖಂಡಿಸಿ ಇಂದು ಹಿಂದೂ ಸಂಘಟನೆಗಳು ಶಿರಸಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಚ್, ಅಶ್ರುವಾಯು ಪ್ರಯೋಗಿಸಿದರು. ಗಲಭೆಯಲ್ಲಿ ಇಬ್ಬರು ಪತ್ರಕರ್ತರು ಗಾಯಗೊಂಡಿದ್ದಾರೆ. ಜತೆಗೆ 6 ವಾಹನಗಳು ಕಲ್ಲು ತೂರಾಟಕ್ಕೆ ಜಖಂಗೊಂಡಿವೆ.ಪರೇಶ್ ಮೇಸ್ತ ಪ್ರಕರಣವನ್ನು ಖಂಡಿಸಿ ಹಾಗೂ ಪರೇಶ್ ಮೇಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಿಂದೂಪರ ಸಂಘಟನೆಗಳು ಇಂದು ಶಿರಸಿ ಬಂದ್ ಗೆ ಕರೆ ನೀಡಿದ್ದವು. ಇಂದು ಮುಂಜಾನೆಯಿಂದಲೇ ಶಿರಸಿ ಸಂಪೂರ್ಣ ಬಂದ್ ಆಗಿದ್ದರೂ ಅಲ್ಲಲ್ಲಿ ಅಂಗಡಿಗಳು ತೆರೆದಿರುವುದನ್ನು ಪ್ರತಿಭಟನಾಕಾರರು ಮುಚ್ಚಿಸಿದರು.ಶಿರಸಿಯ ವಿಕಾಸ ಆಶ್ರಮ ಮೈದಾನದ ಮುಂದೆ ಸೇರಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಾಸಕ ವಿಶ್ವೇಶರ ಹೆಗಡೆ ಕಾಗೇರಿ ನೇತೃತ್ವದಲ್ಲಿ ಪ್ರತಿಭಟನೆಗಿಳಿದರು. ಈ ವೇಳೆ ಪ್ರತಿಭಟನಾ ಜಾಥಾ ನಡೆಸಲು ಮುಂದಾದ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ತಡೆದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!