By: Oneindia Kannada Video Team
Published : October 26, 2017, 05:24

ಪೆಟ್ರೋಲಿಯಂ ಉತ್ಪನ್ನ ಜಿಎಸ್ ಟಿ ಅಡಿ ತರಲು ಕೇಂದ್ರದಿಂದ ಓಲೈಕೆ!

Subscribe to Oneindia Kannada

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ಅಡಿಯಲ್ಲಿ ತರುವ ಪ್ರಯತ್ನದ ಬಗ್ಗೆ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತೊಮ್ಮೆ ಮಾತನಾಡಿದ್ದಾರೆ. ದೇಶದ ನಾನಾ ಭಾಗಗಳಲ್ಲಿ ಪೆಟ್ರೋಲ್- ಡೀಸೆಲ್ ಬೆಲೆ ಭಾರೀ ಏರಿಕೆ ಆಗಿದ್ದು, ಜಿಎಸ್ ಟಿ ಅಡಿ ಈ ಉತ್ಪನ್ನಗಳನ್ನು ತಂದರೆ ದರ ಇಳಿಕೆ ಆಗುತ್ತದೆ ಎಂಬ ಒತ್ತಾಯ ಕೇಳಿಬರುತ್ತಿದೆ. ಈ ಬಗ್ಗೆ ರಾಜ್ಯ ಸರಕಾರಗಳ ಜತೆಗೆ ಕೇಂದ್ರ ಮಾತುಕತೆ ನಡೆಸುತ್ತಿದೆ ಎಂದು ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿದ್ದಾರೆ. ಜಿಎಸ್ ಟಿ ಕೌನ್ಸಿಲ್ ನೇತೃತ್ವ ವಹಿಸಿರುವ ಅರುಣ್ ಜೇಟ್ಲಿ ಎಲ್ಲ ರಾಜ್ಯಗಳ ಜತೆಗೆ ಚರ್ಚೆ ನಡೆಸಿ, ಈ ವಿಚಾರದ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.'ಪೆಟ್ರೋಲಿಯಂ ಖಾತೆ ಸಚಿವನಾಗಿ ರಾಜ್ಯ ಸರಕಾರಗಳಿಗೆ ಮನವಿ ಮಾಡಿದ್ದೇನೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ಅಡಿಯಲ್ಲಿ ತಂದರೆ ಜನರಿಗೆ ಅನುಕೂಲವಾಗುತ್ತದೆ ಎಂಬ ಅಂಶವನ್ನು ಗಮನಕ್ಕೆ ತಂದಿದ್ದೇನೆ' ಎಂದು ಅವರು ತಿಳಿಸಿದ್ದಾರೆ...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!