By : Oneindia Kannada Video Team
Published : February 27, 2018, 03:37

2018ರ ಚುನಾವಣೆಯಲ್ಲಿ ಮೋದಿ ಟೀಮ್ ಗೆ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್

ಸಾರ್ವತ್ರಿಕ ಚುನಾವಣೆಗೆ ಇನ್ನೂ ಒಂದು ವರ್ಷದ ಮೇಲೆ ಇರುವಾಗಲೇ, ಬಿಜೆಪಿ ತಂತ್ರಗಾರಿಕೆ ರೂಪಿಸಲು ಆರಂಭಿಸಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರವಾಗಿ ಯಶಸ್ವೀ ತಂತ್ರಗಾರಿಕೆ ಹಣೆದಿದ್ದ ಪ್ರಶಾಂತ್ ಕಿಶೋರ್ ಮತ್ತೆ ಬಿಜೆಪಿ ಪಾಳಯಕ್ಕೆ ಸೇರುವ ಸಾಧ್ಯತೆ ದಟ್ಟವಾಗಿದೆ. 'ಚಾಯ್ ಪೇ ಚರ್ಚಾ'. 'ಅಬ್ ಕೀ ಬಾರ್ ಮೋದಿ ಸರ್ಕಾರ್' ಮುಂತಾದ ಟ್ಯಾಗ್ ಲೈನ್ ಮೂಲಕ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ರಣತಂತ್ರ ರೂಪಿಸಿ ಸೈ ಎನಿಸಿಕೊಂಡಿದ್ದ ಪ್ರಶಾಂತ್ ಕಿಶೋರ್, 2012ರ ಗುಜರಾತ್ ಅಸೆಂಬ್ಲಿ ಚುನಾವಣೆಯಲ್ಲೂ ಬಿಜೆಪಿ ಪರ ಕೆಲಸ ಮಾಡಿದ್ದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!