By: Oneindia Kannada Video Team
Published : November 15, 2017, 10:33

ಬೆಂಗಳೂರು ತಂಡಕ್ಕೆ ರಾಹುಲ್ ದ್ರಾವಿಡ್ ರಾಯಭಾರಿ

Subscribe to Oneindia Kannada

ಇದೇ ಮೊದಲ ಬಾರಿಗೆ ಇಂಡಿಯನ್ ಸೂಪರ್ ಲೀಗ್ (ಐಎಸ್‍ಎಲ್) ನಲ್ಲಿ ಬೆಂಗಳೂರು ಎಫ್‍ಸಿ ಪದಾರ್ಪಣೆ ಮಾಡುತ್ತಿದೆ. ಬೆಂಗಳೂರು ಎಫ್ ಸಿ ಪರ ರಾಯಭಾರಿಯಾಗಿ ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಅವರು ಕಾಣಿಸಿಕೊಳ್ಳಲಿದ್ದಾರೆ. ನವೆಂಬರ್ 17ರಂದು ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಮುಂಬೈ ಎಫ್‍ಸಿ ವಿರುದ್ಧ ಅಭಿಯಾನ ಆರಂಭಿಸಲಿದೆ. ಭಾರತದ ಕಿರಿಯದ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರು ಬೆಂಗಳೂರು ಎಫ್ ಸಿ ತಂಡದ ನೀಲಿ ಬಣ್ಣದ ಜರ್ಸಿ ತೊಟ್ಟು ಬೆಂಬಲ ಸೂಚಿಸಿದರು. ಈ ಸೀಸನ್ ಪೂರ್ತಿ ದ್ರಾವಿಡ್ ಅವರು ಬ್ಲೂ ಬಾಯ್ ಪರ ಚಿಯರ್ಸ್ ಮಾಡಲಿದ್ದಾರೆ. ತವರಿನಂಗಳದಲ್ಲಿ ಜರುಗಲಿರುವ ಇಂಡಿಯನ್ ಸೂಪರ್ ಲೀಗ್‍ನ ಒಟ್ಟು ಒಂಬತ್ತು ಪಂದ್ಯಗಳ ಪೈಕಿ ಮೆನ್ ಇನ್ ಬ್ಲೂ ತಂಡ, ವಾರಂತ್ಯ ಭಾನುವಾರ ನಾಲ್ಕು ಪಂದ್ಯಗಳನ್ನಾಡಲಿದೆ..

ಬೆಂಗಳೂರು ತಂಡಕ್ಕೆ ರಾಹುಲ್ ದ್ರಾವಿಡ್ ರಾಯಭಾರಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!