By : Oneindia Kannada Video Team
Published : April 07, 2018, 12:51

ಕರ್ನಾಟಕ ಚುನಾವಣೆ ಹಿನ್ನೆಲೆ ನಮ್ಮ ಬೆಂಗಳೂರಿಗೆ ಬರಲಿದ್ದಾರೆ ರಾಹುಲ್ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಕರ್ನಾಟಕ ಜನಾಶೀರ್ವಾದ ಯಾತ್ರೆಯ ಆರನೇ ಭಾಗವಾಗಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಎರಡು ದಿನಗಳ ಕಾಲ ಪ್ರಚಾರ ಸಭೆಯಲ್ಲಿ ಭಾಗಿಯಾಗುವ ರಾಹುಲ್ ಗಾಂಧಿ, ಬೆಂಗಳೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಮುಳಬಾಗಿಲಿನ ಕುದುಮಲೈ ಗಣೇಶ ದೇವಾಲಯಕ್ಕೆ ಭೇಟಿ ನೀಡುವ ಮೂಲಕ ಅವರು ತಮ್ಮ ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!