By : Oneindia Kannada Video Team
Published : March 21, 2018, 06:08

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ರಾಹುಲ್ ಗಾಂಧಿ

1979ರಲ್ಲಿ ಇಂದಿರಾ ಗಾಂಧಿ, 1991ರಲ್ಲಿ ರಾಜೀವ್ ಗಾಂಧಿ ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದೇ ಕೊನೆಯಾಗಿತ್ತು. ಅಲ್ಲಿಂದ ನೆಹರೂ ಕುಟುಂಬದ ಯಾರೂ ಇತ್ತ ಮುಖ ಮಾಡಿರಲಿಲ್ಲ. ಇದೀಗ ನೆಹರೂ ಕುಟುಂಬದ ಮತ್ತೊಂದು ಕುಡಿ ಶೃಂಗೇರಿ ಮಠಕ್ಕೆ ಭೇಟಿ ನೀಡುವ ಮೂಲಕ, ಅಪ್ಪ-ಅಜ್ಜಿ ಕಾಲಕ್ಕೆ ಕೊನೆಯಾಗಿದ್ದ ಮಠದ ಸಂಬಂಧವನ್ನ ಬೆಸೆಯೋಕೆ ಮುಂದಾಗಿದ್ದಾರೆ. ಅದರಂತೆ ಇಂದು ರಾಹುಲ್ ಗಾಂಧಿ ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೂರನೇ ಹಂತದ ಪ್ರವಾಸದಲ್ಲಿ ಮಂಗಳೂರು ಹಾಗೂ ಉಡುಪಿ ಪ್ರವಾಸ ಮುಗಿಸಿ ಇಂದು ಕಾಫಿನಾಡಿಗೆ ಬಂದು ಶೃಂಗೇರಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!