By: Oneindia Kannada Video Team
Published : January 03, 2018, 10:59

ರಾಮ್ ಗೋಪಾಲ್ ವರ್ಮಾ ಟ್ವಿಟ್ಟರ್ ಗೆ ವಾಪಸ್ ,ಬಂದ ಕೂಡಲೇ ರಜಿನಿ ರಾಜಕೀಯ ಪ್ರವೇಶದ ಬಗ್ಗೆ ಟ್ವೀಟ್

Subscribe to Oneindia Kannada

ಜನಪ್ರಿಯ, ವಿವಾದಾತ್ಮಕ ಚಿತ್ರಕರ್ಮಿ ರಾಮ್‌ ಗೋಪಾಲ್ ವರ್ಮಾ ಅವರು ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ಗೆ ರೀ ಎಂಟ್ರಿ ಕೊಟ್ಟಿದ್ದಾರೆ. ಟ್ವಿಟ್ಟರ್ ಗೆ ಬಂದ ವರ್ಮಾ, ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಬಗ್ಗೆ ಟ್ವೀಟ್ ಮಾಡಿದ್ದಾರೆ. ರಜನಿಕಾಂತ್‌ ಅವರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವುದನ್ನು ಸ್ವಾಗತಿಸಿದ್ದಾರೆ. ಮುಂದಿನ ದಿನಗಳಲ್ಲಿ ತಮಿಳುನಾಡಿನ ಎಲ್ಲ ಜನರು ರಜನಿಗೆ ಮಾತ್ರ ವೋಟ್ ಮಾಡಲಿದ್ದಾರೆ ಎಂದಿದ್ದಾರೆ. ಬಾಲಿವುಡ್, ಕಾಲಿವುಡ್, ಟಾಲಿವುಡ್ ನಲ್ಲಿ ಜನಪ್ರಿಯ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿರುವ ರಾಮ್ ಗೋಪಾಲ್ ವರ್ಮಾ ಅವರು ವಿವಾದಾತ್ಮಕ ಟ್ವೀಟ್ ಮಾಡುವುದರಲ್ಲಿ ಎತ್ತಿದ ಕೈ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಅಪರಾಧಿ ಎನಿಸಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವುದನ್ನು ಲೇವಡಿ ಮಾಡಿ ಟ್ವೀಟ್ ಮಾಡಿದ್ದು ಭಾರಿ ಸುದ್ದಿಯಾಗಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!