By: Oneindia Kannada Video Team
Published : November 30, 2017, 02:57

ಮಂಡ್ಯದಿಂದ ಅಂಬರೀಶ್, ಬಸವನಗುಡಿಯಿಂದ ರಮ್ಯಾ ಸ್ಪರ್ಧೆ?

Subscribe to Oneindia Kannada

ಬೆಂಗಳೂರು, ನವೆಂಬರ್ 30 : 'ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ರಮ್ಯಾ, ಸೌಮ್ಯ, ಸುಮಾ ಯಾರೇ ಬಂದರೂ ಓಕೆ. ಪಕ್ಷ ಟಿಕೆಟ್ ಕೊಟ್ಟರೆ ನಾನು ಸ್ಪರ್ಧಿಸುತ್ತೇನೆ'. ಮಾಜಿ ಸಚಿವ, ಮಂಡ್ಯ ಕ್ಷೇತ್ರದ ಶಾಸಕ ಅಂಬರೀಶ್ ಎರಡು ದಿನಗಳ ಹಿಂದೆ ಹೇಳಿದ ಮಾತಿದು. ಮಂಡ್ಯದ ಮಾಜಿ ಸಂಸದೆ, ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಮಂಡ್ಯದ ಯಾವುದಾದರೂ ಕ್ಷೇತ್ರದಿಂದ ಅವರು ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಸುದ್ದಿಗಳು ಹರಿದಾಡುತ್ತಿದ್ದವು. ರಮ್ಯಾ ಮುಂದಿನ ರಾಜಕೀಯ ನಡೆ : ಯಾರು, ಏನು ಹೇಳಿದರು? ರಮ್ಯಾ ಅವರು ಬೆಂಗಳೂರಿನ ಬಸವನಗುಡಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಕಾಂಗ್ರೆಸ್ ವಲಯದಲ್ಲಿ ಕೇಳಿಬಂದಿದೆ. ಆದರೆ, ರಮ್ಯಾ ರಾಜ್ಯ ರಾಜಕಾರಣಕ್ಕೆ ವಾಪಸ್ ಆಗುವ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.'ರಮ್ಯಾ ಅವರು ರಾಜ್ಯ ರಾಜಕಾರಣಕ್ಕೆ ಬರಲು ಹೈಕಮಾಂಡ್ ಒಪ್ಪಿಗೆ ಪಡೆಯಬೇಕು. ರಮ್ಯಾ ಅವರಿಗೆ ಟಿಕೆಟ್ ನೀಡಿದರೆ ಅವರ ಪರವಾಗಿ ಪ್ರಚಾರ ಮಾಡುತ್ತೇನೆ' ಎಂದು ಅಂಬರೀಶ್ ಹೇಳಿದ್ದಾರೆ. ರಮ್ಯಾ ಅವರು ಬಸವನಗುಡಿಯಿಂದ ಸ್ಪರ್ಧಿಸಲಿದ್ದಾರೆಯೇ? ಎಂಬುದು ಇನ್ನಷ್ಟೇ ಖಚಿತವಾಗಬೇಕಿದೆ...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!