By : Oneindia Kannada Video Team
Published : November 28, 2017, 12:11

ಲಂಕಾ ವಿರುದ್ಧ ಏಕದಿನ ಸರಣಿಗೆ ರೋಹಿತ್ ನಾಯಕ

ಪ್ರವಾಸಿ ಶ್ರೀಲಂಕಾ ವಿರುದ್ಧದ ಅಂತಿಮ ಟೆಸ್ಟ್ ಹಾಗೂ ಮೂರು ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಲಂಕಾ ವಿರುದ್ಧ 3ನೇ ಟೆಸ್ಟ್ ಮತ್ತು ಮೂರು ಏಕದಿನ ಸರಣಿಗೆ ಭಾರತದ 15 ಆಟಗಾರರ ಪಟ್ಟಿಯನ್ನು ಸೋಮವಾರ ಬಿಸಿಸಿಐ ಪ್ರಕಟಿಸಿದೆ. ಮೂರು ಏಕದಿನ ಸರಣಿಗೆ ರೋಹಿತ್ ಶರ್ಮ ಅವರಿಗೆ ನಾಯಕತ್ವ ಪಟ್ಟ ನೀಡಲಾಗಿದ್ದು, ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಶ್ರೇಯಸ್ ಅಯ್ಯರ್, ಕನ್ನಡಿಗ ಮನೀಷ್ ಪಾಂಡೆ ಹಾಗೂ ಸಿದ್ಧಾರ್ಥ್ ಕೌಲ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಈಗಾಗಲೇ ಟೀಂ ಇಂಟಿಯಾ ಮೂರು ಟೆಸ್ಟ್ ಗಳ ಪಂದ್ಯಗಳಲ್ಲಿ 1-0 ಅಂತರವನ್ನು ಮುನ್ನಡೆ ಸಾಧಿಸಿದೆ. ಇನ್ನು ಅಂತಿಮ ಟೆಸ್ಟ್ ಪಂದ್ಯ ಡಿಸೆಂಬರ್ 2ರಿಂದ 6ರ ವರೆಗೆ ದೆಹಲಿಯಲ್ಲಿ ನಡೆಯಲಿದ್ದು, ತಂಡವನ್ನು ಕೊಹ್ಲಿ ಮುನ್ನಡೆಸಲಿದ್ದಾರೆ. ಇದೇ ಡಿಸೆಂಬರ್ 10ರಿಂದ ಏಕದಿನ ಸರಣಿ ಆರಂಭವಾಗಲಿದೆ.ಏಕದಿನ ಸರಣಿಗೆ ಭಾರತ ತಂಡವನ್ನು ರೋಹಿತ್ ಶರ್ಮ ಮುನ್ನಡೆಸಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!