By : Oneindia Kannada Video Team
Published : July 06, 2017, 06:04

ಶೋಭಾ ಕರಂದ್ಲಾಜೆ ವಾಗ್ದಾಳಿ | ರಾಹುಲ್ ಬಚ್ಚಾ ಎಂದ ಶೋಭಾ

'ದುರ್ಬಲ' ಪ್ರಧಾನಿ ಎಂದು ನರೇಂದ್ರ ಮೋದಿ ಅವರನ್ನು ಟೀಕಿಸಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಗುರುವಾರ ಬೀದರ್ ನಲ್ಲಿ ವಾಗ್ದಾಳಿ ನಡೆಸಿದರು. ಅಮೆರಿಕ ಪ್ರವಾಸದ ವೇಳೆ ಎಚ್‌1ಬಿ ವೀಸಾ ವಿಚಾರವನ್ನು ಪ್ರಸ್ತಾಪ ಮಾಡದೆ ಹಿಂದಿರುಗಿದ ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಿ ಎಂದು ರಾಹುಲ್ ಗಾಂಧಿ ಅವರು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಶೋಭಾ, "ರಾಹುಲ್ ಗಾಂಧಿ ಒಬ್ಬ ಬಚ್ಚಾ, ಮೋದಿ ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಟೀಕಾ ಪ್ರಹಾರ ನಡೆಸಿದರು.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!