By : Oneindia Kannada Video Team
Published : March 05, 2018, 06:59

ಪಾವಗಡ ಕ್ಷೇತ್ರದಿಂದ ಸಿದ್ದರಾಮಯ್ಯನವರಿಗೆ ಬಂತು ಒಂದು ಪತ್ರ

ತುಮಕೂರು ಜಿಲ್ಲೆಯ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ಕಾಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಕುತೂಹಲದ ಪ್ರಶ್ನೆಯೇ. 2013 ರ ವಿಧಾನಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸೋತಿದ್ದ ಕಾಂಗ್ರೆಸ್ ನ ಎಚ್.ವಿ.ವೆಂಕಟೇಶ್ ಅವರಿಗೆ ಟಿಕೇಟ್ ನೀಡಬಾರದೆಂದು ಕಾಂಗ್ರೆಸ್ ನಲ್ಲಿಯೇ ವಿರೋಧ ವ್ಯಕ್ತವಾಗಿದೆ. ಅದಕ್ಕೆ ಪುಷ್ಠಿ ನೀಡುವಂತೆ ಪ್ರಸ್ತುತ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾಗಿರುವ ಕೆ.ಜಿ.ನಾಗಲಕ್ಷ್ಮಿ ಬಾಯಿ ಅವರಿಗೆ ಈ ಕ್ಷೇತ್ರದ ಟಿಕೇಟ್ ನೀಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಅಮಯ್ಯ ಅವರಿಗೆ ಪತ್ರವೊಂದನ್ನು ಬರೆಯಲಾಗಿದೆ. ಈ ಪತ್ರ ಬರೆದವರು ಪಾವಗಡದ ಮಾಜಿ ಶಾಸಕ ನಾಗಪ್ಪ ಅವರ ಪತ್ನಿ ನಾಗರತ್ನಮ್ಮ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!