By : Oneindia Kannada Video Team
Published : March 20, 2018, 06:33

ಹಸಿವು ಮುಕ್ತ ರಾಜ್ಯವಾಗಿದೆ ನಮ್ಮ ಕರ್ನಾಟಕ, ಎಂದ ಸಿದ್ದರಾಮಯ್ಯ

ಕಳೆದ 5 ವರ್ಷಗಳಿಂದ ರಾಜ್ಯ ಸರ್ಕಾರವು ಹಸಿವು ಮತ್ತು ಅಪೌಷ್ಟಿಕತೆ ಮುಕ್ತ ಸಮಾಜವನ್ನು ನಿರ್ಮಿಸಲು ಬದ್ಧವಾಗಿದೆ. ಕರ್ನಾಟಕದ ಯಾವುದೇ ವ್ಯಕ್ತಿ, ಮಹಿಳೆ ಅಥವಾ ಮಗು ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ ಅನ್ನ ಭಾಗ್ಯ, ಕ್ಷೀರ ಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ, ಸವಿರುಚಿ ಮುಂತಾದ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. 'ಹಸಿವು ಮುಕ್ತ ಸಮಾಜ ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದ್ದು, ಕಲ್ಯಾಣ ಕಾರ್ಯಕ್ರಮಗಳ ಮೂಲಕ ಆಹಾರ ಭದ್ರತೆಯನ್ನು ಸಾಧಿಸಿದ್ದೇವೆ. ನಮ್ಮ ಯೋಜನೆಗಳು ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೊಂಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!