By: Oneindia Kannada Video Team
Published : December 04, 2017, 03:43

ಪ್ರತಾಪ್ ಸಿಂಹಾರನ್ನ ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

Subscribe to Oneindia Kannada

ಪ್ರತಾಪ್ ಸಿಂಹ ವರ್ತನೆ ಬಗ್ಗೆ ಸಿದ್ದರಾಮಯ್ಯ ನುಡಿಮುತ್ತುಗಳು! "ಸಂಸದ ಪ್ರತಾಪ್ ಸಿಂಹ ಅವರೇ, ವಾಹನ ಚಾಲನೆ ಮಾಡಿಕೊಂಡು ಬಂದು, ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳ ಮೇಲೆ ನುಗ್ಗಿಸಿರುವುದು ಅಪರಾಧ. ನೆಲದ ಕಾನೂನನ್ನು ಜನಪ್ರತಿನಿಧಿಗಳೇ ಉಲ್ಲಂಘನೆ ಮಾಡಿದರೆ ಹೇಗೆ?" ಇದು ಪ್ರತಾಪ್ ಸಿಂಹ ವರ್ತನೆಗೆ ಸಿದ್ದರಾಮಯ್ಯ ಪ್ರಶ್ನೆ! ಮೈಸೂರಿನ ಹುಣಸೂರಿನಲ್ಲಿ ಹನುಮ ಜಯಂತಿ ಸಂದರ್ಭದಲ್ಲಿ ನಿಷೇಧಾಜ್ಞೆ ಇದ್ದರೂ ಹಿಂದು ಸಂಘಟನೆ ಕಾರ್ಯಕರ್ತರು ಮೆರವಣಿಗೆ ಹೊರಟಾಗ, ತಡೆದ ಪೊಲೀಸರ ಮೇಲೆ ಆಕ್ರೋಶಗೊಂಡ ಸಂಸದ ಪ್ರತಾಪ್ ಸಿಂಹ ಬ್ಯಾರಿಕೇಡ್ ಗಳನ್ನು ಗುದ್ದಿ, ಕಾರು ಓಡಿಸಿ ಮತ್ತಷ್ಟು ವಿವಾದ ಸೃಷ್ಟಿಸಿದ್ದರು. ಈ ಸಂಬಂಧ ಅವರನ್ನು ಪೊಲೀಸರು ವಶಕ್ಕೆ ಪಡೆದು, ಕ್ರಿಮಿನಲ್ ಕೇಸ್ ದಾಖಲಿಸಿದ್ದರು. ಈ ವಿವಾದಕ್ಕೆ ಸಂಬಂಧಿಸಿದಂತೆ, ಪ್ರತಾಪ್ ಸಿಂಹ ಅವರನ್ನು ಬಂಧಿಸಿದ ಪೊಲೀಸರ ಮತ್ತು ಕರ್ನಾಟಕ ಸರ್ಕಾರದ ಕ್ರಮವನ್ನು ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ತೀವ್ರವಾಗಿ ವಿರೋಧಿಸಿದ್ದವು. ನಂತರ ಪ್ರತಾಪ್ ಸಿಂಹ ವರ್ತನೆಯನ್ನು ಖಂಡಿಸಿದ್ದ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಗಳ ಮೂಲಕ, ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಾರವನ್ನು ನಿಮಗೆ ಕೊಟ್ಟವರ್ಯಾರು ಎಂದು ಪ್ರಶ್ನಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!