By : Oneindia Kannada Video Team
Published : January 12, 2018, 10:52

ಸಿದ್ದರಾಮಯ್ಯನವರ ದೇವಸ್ಥಾನಗಳ ಭೇಟಿ ಹಿಂದಿನ ರಹಸ್ಯ ಏನು

ಅದ್ಯಾಕೋ ಗೊತ್ತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇತ್ತೀಚೆಗೆ ಇದ್ದಕ್ಕಿದ್ದಂತಯೇ ದೇವರ ಮೇಲೆ ಪ್ರೀತಿ ಹೆಚ್ಚಾಗಿದೆ. ಇದಕ್ಕೆ ಪೂರಕವೆಂಬಂತೆ ಇತ್ತೀಚೆಗೆ ನವಕರ್ನಾಟಕ ನಿರ್ಮಾಣ ಯಾತ್ರೆ ಸಂದರ್ಭದಲ್ಲಿ ಉಡುಪಿಯ ಕಟಪಾಡಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು, ಇದೀಗ ಇಂದು (ಜನವರಿ 11) ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ದೇವಾಲಯಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮತ್ತೊಂದೆಡೆ ಅಸ್ತಿಕರಂತೆ ದೇಗುಲದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.ವಿಶೇಷ ಅಂದ್ರೆ ಸಿದ್ದರಾಮಯ್ಯ ಅವರು ಇಂದು ಪೂಜೆ ಸಂದರ್ಭದಲ್ಲಿ ಮಲೆ ಮಹದೇಶ್ವರನ ಮುಂದೆ ಸುಮಾರು ಇಪ್ಪತ್ತು ನಿಮಿಷಗಳ ಕಾಲ ಪ್ರಾರ್ಥನೆ ಸಲ್ಲಿಸಿ ಅಚ್ಚರಿ ಮೂಡಿಸಿದರು.ಸಮಾಜವಾದದ ಹಿನ್ನಲೆಯಿಂದ ಬಂದಿರುವ ಸಿದ್ದರಾಮಯ್ಯ ಅವರು ಪದೇ-ಪದೇ ಚಾಮರಾಜನಗರಕ್ಕೆ ಭೇಟಿ ನೀಡುವ ಮೂಲಕ ಮೂಢನಂಬಿಕೆಯನ್ನು ಅಳಿಸಿ ಹಾಕಿದರೆ.ಕೇವಲ ಚಾಮರಾಜನಗರದ ಮಲೆ ಮಹದೇಶ್ವರನಿಗೆ ಮಾತ್ರವಲ್ಲದೆ ಹಾಗಾಗ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಾ ಬಂದಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!