By: Oneindia Kannada Video Team
Published : January 08, 2018, 11:03

ಮಂಗಳೂರಿನಲ್ಲಿ ಹತ್ಯೆಯಾದ ದೀಪಕ್, ಬಷೀರ್ ಮನೆಗೆ ಸಿಎಂ ಭೇಟಿ

Subscribe to Oneindia Kannada

ದುಷ್ಕರ್ಮಿಗಳಿಂದ ಕೊಲೆಯಾದ ದೀಪಕ್ ರಾವ್ ಮತ್ತು ಅಬ್ದುಲ್ ಬಷೀರ್ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸಂಜೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ದಕ್ಷಿಣ ಕನ್ನಡ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ ಮೊದಲಿಗೆ ಸುರತ್ಕಲ್ ಕಾಟಿಪಳ್ಳದಲ್ಲಿರುವ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಮನೆಗೆ ಸಂಜೆ ವೇಳೆ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿದರು. ಸಿ‌.ಎಂ ಅವರೊಂದಿಗೆ ಸಚಿವ ರಮನಾಥ್ ರೈ, ಯು.ಟಿ ಖಾದರ್, ಮಂಗಳೂರು ಮೇಯರ್ ಕವಿತಾ ಸನಿಲ್ ಕೂಡ ದೀಪಕ್ ಮನೆಗೆ ಭೇಟಿ ನೀಡಿದರು. ಜನವರಿ 3 ರಂದು ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ದೀಪಕ್ ರಾವ್ ಹತ್ಯೆಗೀಡಾಗಿದ್ದರು. ನಂತರ ಮುಖ್ಯಮಂತ್ರಿಗಳು ಜನವರಿ 3ರಂದೇ ರಾತ್ರಿ ಹಲ್ಲೆಗೊಳಗಾಗಿ ಭಾನುವಾರ ಬೆಳಿಗ್ಗೆ ನಿಧನರಾದ ಅಬ್ದುಲ್ ಬಶೀರ್ ಮನೆಗೆ ಭೇಟಿ ನೀಡಿದರು. ಮಂಗಳೂರಿನ ಆಕಾಶಭವನದಲ್ಲಿರುವ ಬಷೀರ್ ಮನೆಗೆ ತರಳಿದ ಮುಖ್ಯಮಂತ್ರಿಗಳು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!