By : Oneindia Kannada Video Team
Published : December 30, 2017, 03:04

ಸಿದ್ದರಾಮಯ್ಯ ಸರ್ಕಾರದಿಂದ ಕೋಲಾರ ಜಿಲ್ಲೆಗೆ ಕೊಡುಗೆಗಳು

ಸಿದ್ದರಾಮಯ್ಯ ಅವರು ಇಂದು ಕೋಲಾರ ಜಿಲ್ಲೆಗೆ ಆಗಮಿಸಲಿದ್ದು, ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನಿಡಲಿದ್ದಾರೆ. ಶಿಲಾನ್ಯಾಸ, ಫಲಾನುಭವಿಗಳಿಗೆ ಚೆಕ್ ವಿತರಣೆ, ಮಾಡಿದ ಬಳಿಕ ಬಹಿರಂಗ ಸಭೆಯನ್ನುದ್ದೇಶಿಸಿ ಮುಖ್ಯಮಂತ್ರಿಗಳು ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸ್ಥಳೀಯ ಕಾಂ ್ರೆಸ್ ಶಾಸಕರು ಸಿದ್ದರಾಮಯ್ಯ ಅವರ ಜೊತೆಗಿರಲಿದ್ದಾರೆ.ಮುಖ್ಯವಾಗಿ ಆರೋಗ್ಯ ಸಚಿವ ರಮೇಶ್ ಕುಮಾರ್ ಹಾಗೂ ಜಿಲ್ಲೆಯ ಪ್ರಭಾವಿ ಮುಖಂಡರಾದ ಕೆ.ಎಚ್.ಮುನಿಯಪ್ಪ ಅವರುಗಳು ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.ಇತ್ತೀಚೆಗೆ ತಾನೇ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಇಂದನ ಸಚಿವ ಡಿ.ಕೆ.ಶಿವಕುಮಾರ್ ಮುಂತಾದ ಪ್ರಮುಖ ನಾಯಕರು ಕೊಲಾರದಲ್ಲಿ ಕಾಂಗ್ರೆಸ್ ಸಮಾವೇಶ ಮಾಡಿದ್ದರು, ಈಗ ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುತ್ತಿರು ುದು ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಲ ಹೆಚ್ಚಿಸಲಿದೆ ಎನ್ನಲಾಗಿದೆ.ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಕೋಲಾರ ಜಿಲ್ಲೆಗೆ ಕಾಂಗ್ರೆಸ್ ಸರ್ಕಾರ ನೀಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಗಮನ ಸೆಳೆಯಲಿದ್ದಾರೆ. ಕೋಲಾರ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರ ಸರ್ಕಾರ ನೀಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!