By : Oneindia Kannada Video Team
Published : November 27, 2017, 03:25

ಬಿಜೆಪಿ ಪರಿವರ್ತನಾ ಯಾತ್ರೆಗೆ ಸೆಡ್ಡು ಹೊಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್

ಬಿಜೆಪಿ ಯಾತ್ರೆಗೆ ಸೆಡ್ಡು ಹೊಡೆಯಲು, ಸಿದ್ದರಾಮಯ್ಯ ಪ್ರತಿತಂತ್ರ! ಬೆಳಗಾವಿಯ ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ 2018ರ ಚುನಾವಣೆಯತ್ತ ಗಮನಹರಿಸಿದ್ದಾರೆ. ಪ್ರತಿಪಕ್ಷ ಬಿಜೆಪಿಗೆ ಸೆಡ್ಡು ಹೊಡೆಯಲು ಪ್ರತಿತಂತ್ರ ರೂಪಿಸುತ್ತಿದ್ದಾರೆ. ಹೌದು, ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಮಾತ್ರ ಬಾಕಿ ಇದೆ. ರಾಜಕೀಯ ಪಕ್ಷಗಳು ಭರ್ಜರಿಯಾಗಿ ತಯಾರಿ ಆರಂಭಿಸಿದ್ದು, ಮೊದಲ ಹಂತದ ಪ್ರಚಾರಕ್ಕೂ ಚಾಲನೆ ನೀಡಿವೆ. ಕಾಂಗ್ರೆಸ್ ಕರ್ನಾಟಕದ ಆಡಳಿತ ಪಕ್ಷ, ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿರುವ ದೊಡ್ಡ ರಾಜ್ಯವೂ ಇದೆ. ಮುಂದಿನ ಚುನಾವಣೆಯಲ್ಲಿಯೂ ಅಧಿಕಾರ ಪಡೆಯಬೇಕು ಎಂಬ ತಂತ್ರದೊಂದಿಗೆ ಪಕ್ಷ ಚುನಾವಣಾ ತಯಾರಿ ಆರಂಭಿಸಿದೆ. ಮನೆ-ಮನೆಗೆ ಕಾಂಗ್ರೆಸ್ ಎಂಬ ಅಭಿಯಾನವನ್ನು ಪಕ್ಷ ಈಗಾಗಲೇ ಬೂತ್ ಮಟ್ಟದಲ್ಲಿ ಆರಂಭಿಸಿದೆ.ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯ ಪ್ರವಾಸವನ್ನು ಕೈಗೊಂಡು ಚುನಾವಣಾ ಪ್ರಚಾರವನ್ನು ಆರಂಭಿಸಿವೆ. ಈ ತಂತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿತಂತ್ರ ರೂಪಿಸಿದ್ದು ರಾಜ್ಯದ ನಾಲ್ಕು ಕಡೆಗಳಿಂದ ಪ್ರಚಾರ ಆರಂಭಿಸಲು ನಿರ್ಧರಿಸಿದ್ದಾರೆ. ಇದಕ್ಕಾಗಿ ರೂಪುರೇಷೆ ಸಿದ್ಧಪಡಿಸುತ್ತಿದ್ದಾರೆ...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!