By : Oneindia Kannada Video Team
Published : February 17, 2018, 05:43

ಮೋದಿ ಕಾರ್ಯಕ್ರಮದ ಅಹ್ವಾನ ಪತ್ರದಲ್ಲಿ ಸಿದ್ದರಾಮಯ್ಯ ಹೆಸರು ನಾಪತ್ತೆ

ನಾಳೆ (ಫೆ.18) ಮೈಸೂರಿಗೆ ಬರುತ್ತಿರುವ ಪ್ರಧಾನಿ ಮೋದಿ ಮಂಗಳವಾರ (ಫೆ.19) ಮೈಸೂರಿನಲ್ಲಿ ಎರಡು ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ, ಆದರೆ ಈ ಕಾರ್ಯಕ್ರಮಗಳಿಗೆ ರಾಜ್ಯದ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿಲ್ಲ. ಪ್ರಧಾನಿ ಅವರು ಮಂಗಳವಾರದಂದು ಬೆಂಗಳೂರು-ಮೈಸೂರು ದ್ವಿಪಥ ರೈಲ್ವೆ ಹಾಗೂ ಇಎಸ್‌ಐ ಆಸ್ಪತ್ರೆ ಸೇವೆ ಉದ್ಘಾಟನೆ ಮಾಡಲಿದ್ದಾರೆ. ಇವೆರಡೂ ಸರ್ಕಾರಿ ಕಾರ್ಯಕ್ರಮಗಳಾಗಿದ್ದು ಎರಡೂ ಕಾರ್ಯಕ್ರಮಕ್ಕೆ ಶಿಷ್ಟಾಚಾರದ ಅನ್ವಯ ಮುಖ್ಯಮಂತ್ರಿಗಳಿಗೆ ಆಹ್ವಾನ ಇರಬೇಕಿತ್ತು. ಆದರೆ ಆಹ್ವಾನ ಪತ್ರದಲ್ಲಿ ಮುಖ್ಯಮಂತ್ರಿಗಳ ಹೆಸರಿಲ್ಲ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!