By : Oneindia Kannada Video Team
Published : December 18, 2017, 01:40

ಗುಜರಾತ್ ಹಿಮಾಚಲ ಪ್ರದೇಶದ ಚುನಾವಣೆ ಫಲಿತಾಂಶದ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

'ಗುಜರಾತ್ ಚುನಾವಣೆಯಲ್ಲಿ ನಾವು ಸೋತು ಗೆದ್ದಿದ್ದೇವೆ. ರಾಜ್ಯದಲ್ಲಿ ನರೇಂದ್ರ ಮೋದಿ ಅವರ ಪ್ರಭಾವ ಕುಗ್ಗಿದೆ' ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸೋಮವಾರ ಯಾದಗಿರಿಯಲ್ಲಿ ಮಾತನಾಡಿದ ಅವರು, 'ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಫಲಿತಾಂಶ ಸುಧಾರಿಸಿದೆ. ನರೇಂದ್ರ ಮೋದಿ, ಅಮಿತ್ ಶಾ ಆಟ ಕರ್ನಾಟಕದಲ್ಲಿ ನಡೆಯುವುದಿಲ್ಲ' ಎಂದು ಸ್ಪಷ್ಟಪಡಿಸಿದರು.'ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತು ಗೆದ್ದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತವರು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ತವರು ರಾಜ್ಯವದು. ಕೇಂದ್ರ ಸರ್ಕಾರವೂ ಅವರದ್ದೆ. ಗೆಲುವು ಸುಲಭವಾಗಿದೆ' ಎಂದರು.'ಗುಜರಾತ್ ರಾಜ್ಯದಲ್ಲಿ ನರೇಂದ್ರ ಮೋದಿ ಅವರ ಪ್ರಭಾವ ಕುಗ್ಗಿದೆ. ನೋಟು ಬ್ಯಾನ್, ಜಿಎಸ್‌ಟಿಗೆ ಜನರು ಬೆಂಬಲ ನೀಡಿದ್ದರೆ ಕಾಂಗ್ರೆಸ್ ಸಂಪೂರ್ಣವಾಗಿ ಸೋಲಬೇಕಿತ್ತಲ್ಲವೇ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.ಎರಡೂ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಕರ್ನಾಟಕದ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ತೀರ್ಪನ್ನು ಸ್ವಾಗತಿಸುತ್ತೇವೆ'

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!