By : Oneindia Kannada Video Team
Published : January 04, 2018, 01:54

ಕೆ ಪಿ ನಂಜುಂಡಿ, ರಾಜ್ಯ ಬಿಜೆಪಿ ನಾಯಕ ಉದ್ಯಮಿಗೆ ಐ ಟಿ ಶಾಕ್

ವಿಧಾನ ಪರಿಷತ್‌ ಸದಸ್ಯ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ಇತ್ತೀಚೆಗೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆ ಪಿ ನಂಜುಂಡಿ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಹಾಗೂ ಚಿನ್ನದ ಉದ್ಯಮಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೆ.ಪಿ.ನ೦ಜು೦ಡಿ ಅವರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ನಡೆಸಿದ್ದಾರೆ. ಗುರುವಾರ ಬೆಂಗಳೂರಿನಲ್ಲಿರುವ ಕೆ.ಪಿ.ನ೦ಜು೦ಡಿ ಅವರ ಚಿನ್ನದ ಅಂಗಡಿ, ಕಚೇರಿ, ಮನೆ ಮೇಲೆ ಬೆಂಗಳೂರು ಹಾಗೂ ಗೋವಾ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.ಅಷ್ಟೇ ಅಲ್ಲದೇ ನ೦ಜು೦ಡಿ ಅವರ ಅಂಗಡಿ ಅಧಿಕಾರಿ ಸೇರಿದಂತೆ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!