ಮೂವರು ವಿದ್ಯಾರ್ಥಿಗಳಿಗೆ NEET ಮಿಸ್! ತೇಜಸ್ವಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು
ಬೆಂಗಳೂರಿನಲ್ಲಿ NEET ಪರೀಕ್ಷೆ ನಡೆಯುತ್ತಿದ್ದ ದಿನ ಕಾಂಗ್ರೆಸ್ ಆಯೋಜಿಸಿದ್ದ ಬೃಹತ್ ರ‍್ಯಾಲಿಯಿಂದ ಭಾರೀ ಟ್ರಾಫಿಕ್ ಸಮಸ್ಯೆ ಉಂಟಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಯಿತು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ, "ಮೊದಲು ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೆ ಮಾಡಿರುವ ಅನ್ಯಾಯಗಳಿಗೆ ತೇಜಸ್ವಿ ಸೂರ್ಯ ಕ್ಷಮೆ ಕೇಳಬೇಕು. ಕಾಂಗ್ರೆಸ್ ಸರ್ಕಾರದಿಂದ ಮೂವರು ವಿದ್ಯಾರ್ಥಿಗಳು NEET ಬರೆಯಲು ಸಾಧ್ಯವಾಗಲಿಲ್ಲ ಎಂದು ಆರೋಪಿಸುತ್ತಿದ್ದರೆ, ದೆಹಲಿ, ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲೂ ವಿದ್ಯಾರ್ಥಿಗಳು ಪರೀಕ್ಷೆ ತಪ್ಪಿಸಿಕೊಂಡಿದ್ದಾರೆ. ಅಲ್ಲಿ ಕೂಡಾ ರಾಜ್ಯ ಸರ್ಕಾರಗಳೇ ಹೊಣೆನಾ?" ಎಂದು ಪ್ರಶ್ನಿಸಿದ್ದಾರೆ.
Video Published On: Monday, Jun 22, 2026, 03:54 [IST]


Click it and Unblock the Notifications