By: Oneindia Kannada Video Team
Published : November 06, 2017, 07:15

ಟಿಪ್ಪು ಜಯಂತಿ ವಿರೋಧಿಸಿ ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ

Subscribe to Oneindia Kannada

ಟಿಪ್ಪು ಜಯಂತಿ ವಿರೋಧಿಸಿ ಒನಕೆ ಹಿಡಿದು ವಿನೂತನ ಪ್ರತಿಭಟನೆ. ಟಿಪ್ಪು ಜಯಂತಿ ಆಚರಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಒನಕೆ ಓಬವ್ವ ಹೋರಾಟ ವೇದಿಕೆ ಸೋಮವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಮಹಿಳೆಯರು ಓಬವ್ವನ ವೇಷ ಧರಿಸಿ ಒನಕೆ ಹಿಡಿದು ವಿನೂತನವಾಗಿ ಪ್ರತಿಭಟನೆ ಮಾಡಿದರು. ಟಿಪ್ಪು ಜಯಂತಿ ಆಚರಣೆಯಿಂದ ಓಬವ್ವನ ಶೌರ್ಯದ ಇತಿಹಾಸಕ್ಕೆ ಅವಮಾನ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಬಿಜೆಪಿ ನಾಯಕರಾದ ಅನ್ವರ್ ಮಾಣಿಪ್ಪಾಡಿ, ಚಿ.ನಾ.ರಾಮು ಸೇರಿ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಮಾತನಾಡಿದ ಅನ್ವರ್ ಮಾಣಿಪ್ಪಾಡಿ, "ಸರ್ಕಾರದಿಂದ ಮಿರ್ಜಾ ಇಸ್ಮಾಯಿಲ್ ಜನ್ಮ ದಿನಾಚರಣೆ ಮಾಡಲಿ.ಮಿರ್ಜಾ ಇಸ್ಮಾಯಿಲ್ ರನ್ನ ನಾವು ಸಹಿಸಿಕೊಳ್ತೇವೆ. ಆದರೆ, ಟಿಪ್ಪು ಜಯಂತಿ ಅಕ್ಷಮ್ಯ ಅಪರಾಧ" ಎಂದು ವಾಗ್ದಾಳಿ ನಡೆಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!