By: Oneindia Kannada Video Team
Published : October 26, 2017, 10:19

ಉಡುಪಿ : ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲು

Subscribe to Oneindia Kannada

ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ದಿನಗಳ ಕಾಲ ಶ್ರೀಗಳಿಗೆ ಚಿಕಿತ್ಸೆ ನೀಡುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.. 86 ವರ್ಷದ ವಿಶ್ವೇಶತೀರ್ಥ ಶ್ರೀಗಳಿಗೆ ತಿಂಗಳ ಹಿಂದೆ ಹರ್ನಿಯಾ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಬುಧವಾರ ರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಕ್ಯಾನಿಂಗ್ ನಡೆಸಬೇಕು ಹಾಗೂ ಚಿಕಿತ್ಸೆ ನೀಡಬೇಕು ಎಂದು ವೈದ್ಯರು ಹೇಳಿದ್ದಾರೆ. ಬುಧವಾರ ರಾತ್ರಿಯ ಪೂಜೆ ಮುಗಿಸಿದ ಬಳಿಕ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ವಾಮೀಜಿ ಆರೋಗ್ಯವಾಗಿದ್ದಾರೆ ಭಕ್ತರು ಆತಂಕಪಡುವ ಅಗತ್ಯವಿಲ್ಲ ಎಂದು ಮಠದ ಅಧಿಕಾರಿಗಳು ಹೇಳಿದ್ದಾರೆ. ಈಗಾಗ್ಲೇ ವೈದ್ಯರು ಸ್ಪಷ್ಟ ಪಡಿಸಿದ್ದಾರೆ ಸ್ವಾಮೀಜಿ ಆರೋಗ್ಯವಾಗಿದ್ದಾರೆ ಇನ್ನು ಎರಡು ದಿನಗಳ ಕಾಲ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತೆ ಅಂತ ಕೆಎಂಸಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!