By : Oneindia Kannada Video Team
Published : December 26, 2017, 12:46

ಉಪೇಂದ್ರ ರವರ ಕೆಪಿಜೆಪಿ ಸಂಭಾವ್ಯ ಪ್ರಣಾಳಿಕೆ ಬಿಡುಗಡೆ

ನಟ, ನಿರ್ದೇಶಕ ಉಪೇಂದ್ರ ಅವರಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಸಂಭಾವ್ಯ ಪ್ರಣಾಳಿಕೆಯನ್ನು ಭಾನುವಾರದಂದು ಪ್ರಕಟಿಸಲಾಗಿದೆ.
ಉಪೇಂದ್ರ ನೇತೃತ್ವದ 'ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ'ದ ಬಹುನಿರೀಕ್ಷಿತ ಸಂಭಾವ್ಯ ಪ್ರಣಾಳಿಕೆ ಬಿಡುಗಡೆಯಾಗಿದೆ. ಪ್ರಣಾಳಿಕೆಯ ಭಾಗ 1ರಲ್ಲಿ ಪಾರದರ್ಶಕ ಆಡಳಿತಕ್ಕೆ ಉಪೇಂದ್ರ ಹೆಚ್ಚು ಒತ್ತು ಕೊಟ್ಟಿದ್ದಾರೆ.ಸಂಭಾವ್ಯ ಪ್ರಣಾಳಿಕೆಯ ಭಾಗ -1ರಲ್ಲಿ ಭ್ರಷ್ಟಾಚಾರ ರಹಿತ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಲಿದೆ. ಜನ ಪ್ರತಿನಿಧಿಗಳ ಹಕ್ಕು, ಕರ್ತವ್ಯ, ಜವಾಬ್ದಾರಿ ಬಗ್ಗೆ, ಸರ್ಕಾರಕ್ಕೆ ತಂತ್ರಜ್ಞಾನದ ನೆರವು, ಇ-ವ್ಯವಸ್ಥೆ, ಸಾಮಾಜಿಕ ಜಾಲತಾಣಗಳಲ್ಲಿ ಆಡಳಿತದ ಬಗ್ಗೆ ಮಾಹಿತಿ ಇರಬೇಕು ಎಂದು ಹೇಳಲಾಗಿದೆ.ಜನಪ್ರತಿನಿಧಿಗಳಲ್ಲದೆ, ಎಲ್ಲಾ ನೀತಿ ನಿಯಮಗಳು ಸರ್ಕಾರಿ ಅಧಿಕಾರಿಗಳು,ನೌಕರರಿಗೂ ಅನ್ವಯವಾಗಲಿದೆ.ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.ಸಂಭಾವ್ಯ ಪ್ರಣಾಳಿಕೆಯ ಭಾಗ -1ರಲ್ಲಿ 24 ಅಂಶಗಳಿವೆ.ಸಂಪೂರ್ಣ ಪಾರದರ್ಶಕ, ಸರಳ, ಹೊಣೆಗಾರಿಕೆಯುಳ್ಳ, ಮಿತವ್ಯಯೀ ಹಾಗೂ ಪ್ರಜೆಗಳನ್ನೊಳಗೊಂಡ ಆಡಳಿತ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!