By : Oneindia Kannada Video Team
Published : January 26, 2018, 12:36

ಉಪೇಂದ್ರ ಅವರ ಕೆಪಿಜೆಪಿಯ ಶಿಕ್ಷಣ ಪ್ರಣಾಳಿಕೆ ಪ್ರಕಟ

ನಟ, ನಿರ್ದೇಶಕ ಉಪೇಂದ್ರ ಅವರ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಶಿಕ್ಷಣ ಪ್ರಣಾಳಿಕೆಯನ್ನು ಪ್ರಕಟಿಸಲಾಗಿದೆ. 'ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ'ದ ಪ್ರಣಾಳಿಕೆಯನ್ನು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದಕ್ಕೂ ಮುನ್ನ ಸಂಭಾವ್ಯ ಪ್ರಣಾಳಿಕೆಯ ಭಾಗ -1ದಲ್ಲಿ ಭ್ರಷ್ಟಾಚಾರ ರಹಿತ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಲಿದೆ. ಜನ ಪ್ರತಿನಿಧಿಗಳ ಹಕ್ಕು, ಕರ್ತವ್ಯ, ಜವಾಬ್ದಾರಿ ಬಗ್ಗೆ, ಸರ್ಕಾರಕ್ಕೆ ತಂತ್ರಜ್ಞಾನದ ನೆರವು, ಇ-ವ್ಯವಸ್ಥೆ, ಸಾಮಾಜಿಕ ಜಾಲತಾಣಗಳಲ್ಲಿ ಆಡಳಿತದ ಬಗ್ಗೆ ಮಾಹಿತಿ ಇರಬೇಕು ಎಂದು ಹೇಳಲಾಗಿತ್ತು.

ಪಕ್ಷದ ಪ್ರಣಾಳಿಕೆ ಕುರಿತು ಸಾರ್ವಜನಿಕರು ತಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅವಕಾಶ ನೀಡಲಾಗಿದ್ದು, ಕೆಲವೇ ದಿನಗಳಲ್ಲಿ ಪಕ್ಷದ ಅಂತಿಮ ಹಾಗೂ ಅಧಿಕೃತ ಪ್ರಣಾಳಿಕೆಯ ಪೂರ್ಣ ಭಾಗವನ್ನು ಬಿಡುಗಡೆಗೊಳಿಸುತ್ತೇವೆ ಎಂದು ಉಪೇಂದ್ರ ಹೇಳಿದ್ದಾರೆ. ಈಗ ಶಿಕ್ಷಣದ ಬಗ್ಗೆ ಸಂಭಾವ್ಯ ಪ್ರಣಾಳಿಕೆ(ಭಾಗ 3)ಯನ್ನು ಗುರುವಾರ ಬಿಡುಗಡೆ ಮಾಡಲಾಗಿದೆ. ಪ್ರಾಥಮಿಕ, ಮಾಧ್ಯಮಿಕ ಹಾಗೂ ಉನ್ನತ ಶಿಕ್ಷಣಕ್ಕೆ ಮೀಸಲಿಟ್ಟ 22,662 ಕೋಟಿ ರೂಪಾಯಿ ರಾಜ್ಯ ಬಜೆಟ್‌ ಆಧಾರದ ಮೇಲೆ ಈ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!