By : Oneindia Kannada Video Team
Published : November 20, 2017, 11:29

ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ, ಇಂದು ಮುಹೂರ್ತ ನಿಗದಿ ?

ಗುಜರಾತ್‌ ಚುನಾವಣೆಗೂ ಮುಂಚಿತವಾಗಿ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆಗಳಿವೆ. ರಾಹುಲ್‌ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಮುಹೂರ್ತ ನಿಗದಿಪಡಿಸುವುದಕ್ಕಾಗಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಬೆಳಿಗ್ಗೆ 10.30ಕ್ಕೆ ತಮ್ಮ ದೆಹಲಿಯ ನಿವಾಸದಲ್ಲಿ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಕರೆದಿದ್ದಾರೆ. ಕಾಂಗ್ರೆಸ್ ನ ಇತಿಹಾಸದಲ್ಲೇ ಅಧಿಕ ಕಾಲ ಅಧ್ಯಕ್ಷೆಯೆಯಾಗಿ ಮುಂದುವರಿದ ಸೋನಿಯಾ ಗಾಂಧಿಯ ನೇತೃತ್ವದಲ್ಲಿನ ಕೊನೆಯ ಕಾರ್ಯಕಾರಿ ಸಮಿತಿ ಸಭೆ ಇದಾಗಲಿದೆ. ಗುಜರಾತ್ ಚುನಾವಣೆ ಬಳಿಕವೇ ರಾಹುಲ್ ಗಾಂಧಿ ಕಾಂಗ್ರೆಸ್ ನ ಅಧ್ಯಕ್ಷರಾಗುವ ಬಗ್ಗೆ ಕಾಂಗ್ರೆಸ್ ನಲ್ಲಿ ಹೇಳಲಾಗಿತ್ತು. ಇದೀಗ ಯುವ ನಾಯಕ ರಾಹುಲ್ ಗಾಂಧಿಯನ್ನು ಅಧ್ಯಕ್ಷ ಸ್ಥಾನಕ್ಕೆ ತರುವ ಮೂಲಕ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಕಾರ್ಯಕ್ಕೆ ಕಾಂಗ್ರೆಸ್ ಮುಂದಾಗುತ್ತಿದೆ. ಇಂದು ನಡೆಯಲಿರುವ ಸಿಡಬ್ಲ್ಯುಸಿ ಸಭೆ ಬಹಳ ಮಹತ್ವದಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!