By : Oneindia Kannada Video Team
Published : January 28, 2018, 03:02

ಬಿಜೆಪಿ ಸೇರುವ ಬಗ್ಗೆ ಡಾ.ಎ.ಬಿ.ಮಾಲಕರಡ್ಡಿ ಹೇಳಿದ್ದೇನು?

'ವಯಸ್ಸಿನ ಕಾರಣದಿಂದ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ' ಎಂದು ಯಾದಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಎ.ಬಿ.ಮಾಲಕರಡ್ಡಿ ಘೋಷಣೆ ಮಾಡಿದ್ದಾರೆ.

ಯಾದಗಿರಿಯಲ್ಲಿ ಮಾತನಾಡಿದ ಡಾ.ಎ.ಬಿ.ಮಾಲಕರಡ್ಡಿ ಅವರು, 'ವಯಸ್ಸಾದ ಹಿನ್ನಲೆಯಲ್ಲಿ ಚುನಾವಣೆಗೆ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ. ಮತದಾರರು, ಅಭಿಮಾನಿಗಳು ಒತ್ತಾಯ ಮಾಡಿದರು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುತ್ತೇನೆ' ಎಂದು ಹೇಳಿದ್ದಾರೆ.

'ನಾನು ಸ್ಪರ್ಧಿಸುವುದಿಲ್ಲ. ನಮ್ಮ ಕುಟುಂಬದವರು ಯಾರೂ ಸಹ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ' ಎಂದು ಡಾ.ಎ.ಬಿ.ಮಾಲಕರಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.ಡಾ.ಎ.ಬಿ.ಮಾಲಕರಡ್ಡಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, 'ಯಾವು ಯಾವುದೇ ಪಕ್ಷವನ್ನು ಸೇರುತ್ತಿಲ್ಲ' ಎಂದು ಹೇಳುವ ಮೂಲಕ ಮಾಲಕರಡ್ಡಿ ಅವರು ಬಿಜೆಪಿ ಸೇರ್ಪಡೆ ವದಂತಿಯನ್ನು ತಳ್ಳಿ ಹಾಕಿದರು.ಬೆಳಗಾವಿಯಲ್ಲಿ ಅಧಿವೇಶ ನಡೆಯುವಾಗಿ 'ನಿಮ್ಮ ಆಡಳಿತ ಅವಧಿಯಲ್ಲಿ ಆಗಿರುವ ಅವಮಾನ ಸಾಕು. ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟು ಹೋಗುವೆ' ಎಂದು ಎ.ಬಿ.ಮಾಲಕ ರಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆಯೇ ಹೇಳಿಕೆ ನೀಡಿ ಸುದ್ದಿ ಮಾಡಿದ್ದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!