By: Oneindia Kannada Video Team
Published : November 16, 2017, 12:29

ಪ್ರಮೋದ್ ಮಧ್ವರಾಜ್ ಬಿಜೆಪಿಗೆ, ಕಟೀಲ್ ಕೊಟ್ಟ ಸುಳಿವು!

Subscribe to Oneindia Kannada

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಲಿದ್ದಾರೆ?. ಹಲವು ದಿನಗಳ ಹಿಂದೆ ಹಬ್ಬಿದ್ದ ಈ ಸುದ್ದಿಗೆ ಮತ್ತೆ ಜೀವ ಬಂದಿದೆ. ಸಂಸದ ನಳೀನ್ ಕುಮಾರ್ ಕಟೀಲ್ ಈ ಕುರಿತು ಸುಳಿವು ಕೊಟ್ಟಿದ್ದಾರೆ. ಬುಧವಾರ ಮಂಗಳೂರಿನಲ್ಲಿ ಸಹಕಾರ ಸಪ್ತಾಹದ ಬಹಿರಂಗ ಸಭೆ ನಡೆಯಿತು. ಸಚಿವರಾದ ಪ್ರಮೋದ್ ಮಧ್ವರಾಜ್, ರಮಾನಾಥ ರೈ, ರಮೇಶ್ ಜಾರಕಿಹೊಳಿ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ನಳೀನ್ ಕುಮಾರ್ ಕಟೀಲ್ ಸಭೆಯಲ್ಲಿ ಪಾಲ್ಗೊಂಡಿದ್ದರು . ಸಭೆಯಲ್ಲಿ ನಳೀನ್ ಕುಮಾರ್ ಕಟೀಲ್ ಅವರು ಭಾಷಣ ಮಾಡುವಾಗ, 'ಇನ್ನು ಕೆಲವೇ ದಿನಗಳಲ್ಲಿ ನೀವು (ಪ್ರಮೋದ್ ಮಧ್ವರಾಜ್) ನಮ್ಮೊಟ್ಟಿಗೆ ಬರಲಿದ್ದೀರಿ' ಎಂದು ನೀಡಿರುವ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಕೆಲವು ದಿನಗಳ ಹಿಂದೆ ಉಡುಪಿಯ ಪ್ರವಾಸಿ ಮಂದಿರದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರನ್ನು ಪ್ರಮೋದ್ ಮಧ್ವರಾಜ್ ಭೇಟಿ ಮಾಡಿದ್ದರು. ನಂತರ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!