By : Oneindia Kannada Video Team
Published : February 26, 2018, 01:12

ಕರ್ನಾಟಕ ಕಾಂಗ್ರೆಸ್ ಮೇಲೆ ಪೂರಾ ಹಿಡಿತ ಸಾಧಿಸಿದ್ದಾರಾ ಸಿದ್ದರಾಮಯ್ಯ

ಇದುವರೆಗಿನ ಹೆಚ್ಚುಕಮ್ಮಿ ಐದು ವರ್ಷದ ಅವಧಿಯಲ್ಲಿ ಮೂಲ ಕಾಂಗ್ರೆಸ್ಸಿಗರು ಏನು ಆಗಬಾರದೆಂದು ಬಯಸಿದ್ದರೋ, ಅದೇ ದಿಕ್ಕಿನಲ್ಲಿ ಸಾಗುತ್ತಿದೆಯಾ ರಾಜ್ಯ ಕಾಂಗ್ರೆಸ್ಸಿನ ವಿದ್ಯಮಾನಗಳು? ಮುಖ್ಯಮಂತ್ರಿ ಸಿದ್ದರಾಮಯ್ಯ, ಆಡಳಿತ ಯಂತ್ರ ಜೊತೆಗೆ, ರಾಜ್ಯ ಕಾಂಗ್ರೆಸ್ ನಲ್ಲೂ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗುತ್ತಿದ್ದಾರಾ? ಎಐಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುತ್ತಿರುವ ಜನಾಶೀರ್ವಾದ ರ‍್ಯಾಲಿಯಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯನವರಿಗೆ ನೀಡುತ್ತಿರುವ ಪ್ರಾಮುಖ್ಯತೆ ನೋಡಿದರೆ, ಯೆಸ್, ಚುನಾವಣಾ ಹೊಸ್ತಿಲಲ್ಲಿರುವ ಕರ್ನಾಟಕ ಕಾಂಗ್ರೆಸ್ ಘಟಕದಲ್ಲಿ ಸಿದ್ದರಾಮಯ್ಯನವರ ಪ್ರಭಾವ ಹೆಚ್ಚಾಗುತ್ತಿರುವುದು ಅತ್ಯಂತ ಸ್ಪಷ್ಟವಾಗುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!