Tap to Read ➤

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ರಾಜಕಾರಣಿಗಳ ಪ್ರತಿಕ್ರಿಯೆ

ಕರ್ನಾಟಕದ ಸಚಿವ ಕೆ.ಎಸ್.​​ ಈಶ್ವರಪ್ಪ ವಿರುದ್ಧ ಶೇ.40 ಕಮಿಷನ್‌ ಆರೋಪ ಮಾಡಿದ್ದ ಬೆಳಗಾವಿಯ ಸಂತೋಷ್, ಉಡುಪಿಯಲ್ಲಿ ಆತ್ಮಹತ್ಯೆ, ಈ ಬಗ್ಗೆ ರಾಜಕಾರಣಿಗಳ ಪ್ರತಿಕ್ರಿಯೆ ಇಲ್ಲಿದೆ..
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಮೂಲದ ಸಂತೋಷ್ ಪಾಟೀಲ್ ಆತ್ಮಹತ್ಯೆ
ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದು, ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ವಾಟ್ಸ್‌ಆಪ್ ಕಳುಹಿಸಿದ್ದಾರೆ
ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ, ಆತ ಯಾರೆಂದೇ ಗೊತ್ತಿಲ್ಲ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ: ಕೆ.ಎಸ್. ಈಶ್ವರಪ್ಪ
ಕೆ.ಎಸ್. ಈಶ್ವರಪ್ಪ
ಸಂತೋಷ್ ಸಾವಿನ ಕುರಿತು ರಾಹುಲ್‌ಗಾಂಧಿ ಟ್ವೀಟ್: 40% ಕಮಿಷನ್ ಪಡೆಯುವ ಬಿಜೆಪಿ ಸರ್ಕಾರ ಅವರ ಪಕ್ಷದ ಕಾರ್ಯಕರ್ತನ ಜೀವ ಪಡೆದಿದೆ
ಸಿದ್ದರಾಮಯ್ಯ
ಸಂತೋಷ್‌ದು ಆತ್ಮಹತ್ಯೆ ಅಲ್ಲ, ಕೊಲೆ. ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಿ, ಸಚಿವ ಸಂಪುಟದಿಂದ ತೆಗೆಯಬೇಕು: ಸಿದ್ದರಾಮಯ್ಯ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಪ್ರಾಮಾಣಿಕವಾಗಿ ಮತ್ತು ಪಾರದರ್ಶಕವಾಗಿ ತನಿಖೆ ಮಾಡಲಾಗುವುದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
ರಣದೀಪ್ ಸುರ್ಜೆವಾಲ
ಭ್ರಷ್ಟಾಚಾರ ಬೊಮ್ಮಾಯಿ ಅವರ ಸರ್ಕಾರವನ್ನು ಸಂಪೂರ್ಣವಾಗಿ ಆವರಿಸಿದೆ. ಅಡಿಯಿಂದ ಮುಡಿವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ: ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ
ಆತ್ಮಹತ್ಯೆಯಾಗಿರುವ ವ್ಯಕ್ತಿ ತನ್ನ ಸಾವಿಗೆ ಕಾರಣ ಯಾರು ಎಂಬುದನ್ನು ಡೆತ್ ನೋಟ್‌ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದು, ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ, ಬಂಧಿಸಿ: ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್