Tap to Read ➤

ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ತಂಪೆರೆದ ವರುಣ

ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸಂಜೆ ವೇಳೆಗೆ ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣವಿತ್ತು.
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸಂಜೆ ವೇಳೆಗೆ ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ನಗರದಲ್ಲಿ ಭಾರೀ ಅವಾಂತರ ಸೃಷ್ಟಿಸಿದೆ.
ಕಳೆದ ಎರಡು ತಿಂಗಳಿನಿಂದ ನೆತ್ತಿ ಸುಡುವಂತಹ ಬಿಸಿಲಿಗೆ ಬಳಲಿ ಬೆಂಡಾಗಿದ್ದ ಜನರಿಗೆ ಬುಧವಾರ ಸುರಿದ ಮಳೆ ನಗರದಲ್ಲಿ ತಂಪೆರೆದಿದೆ.
ಬೆಂಗಳೂರಿನ ಜಯನಗರ, ಸೌತ್ ಎಂಡ್ ಸರ್ಕಲ್, ಜೆ.ಪಿ. ನಗರ, ಬನಶಂಕರಿ, ವಿಲ್ಸನ್ ಗಾರ್ಡನ್, ಟೌನ್ ಹಾಲ್, ಮೈಸೂರು ರಸ್ತೆ, ಕತ್ರಿಗುಪ್ಪೆ, ಪದ್ಮನಾಭನಗರ, ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜೋರು ಮಳೆಗೆ ಮರಗಳು ಬಿದ್ದು, ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬುಧವಾರ ಸುರಿದ ಮಳೆಗೆ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಂಜೆ ವೇಳೆಗೆ ಕೆಲಸ ಮುಗಿಸಿಕೊಂಡು ಮನೆ ಸೇರಬೇಕೆಂದುಕೊಂಡವರಿಗೆ ವಾಹನ ದಟ್ಟಣೆ ಎದುರಾಗಿದೆ. ಬೈಕ್ ಸವಾರರು ಅಲ್ಲಲ್ಲಿ ಫ್ಲೈಓವರ್ ಕೆಳಗೆ ಆಶ್ರಯ ಪಡೆದಿದ್ದಾರೆ. ಮಳೆಯಿಂದಾಗಿ ಶಿವಾಜಿನಗರದಲ್ಲಿ ಎಲ್ಲೆಡೆ ವಿದ್ಯುತ್ ಕಡಿತವಾಗಿದೆ.
ಒಮ್ಮೆಲೆ ಸುರಿದ ಬಿರುಗಾಳಿ ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ ಉಂಟಾಗಿದೆ. ಶಾಂತಿನಗರ, ಕೋರಮಂಗಲ, ಅಡುಗೋಡಿ, ಮೆಜೆಸ್ಟಿಕ್, ಜೆ.ಸಿ. ನಗರ, ಜೆ.ಪಿ. ನಗರ ಸೇರಿದಂತೆ ಹಲವೆಡೆ ಮಳೆ ಸುರಿದಿದೆ.
ಅತ್ತಿಗುಪ್ಪೆ ವಾರ್ಡ್ 132ರ ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ಬಳಿ ಧಾರಾಕಾರ ಮಳೆಗೆ ಉರುಳಿ ಬಿದ್ದ‌ ಬೃಹತ್ ಮರವನ್ನು ಅರಣ್ಯ ಸಿಬ್ಬಂದಿಗಳು ಹಾಗೂ ಟ್ರಾಫಿಕ್ ಪೋಲಿಸರ ಸಹಾಯದೊಂದಿಗೆ ತೆರವುಗೊಳಿಸಲಾಯಿತು.
ಧಾರಾಕಾರ ಮಳೆಗೆ ಬೆಂಗಳೂರಿನ ಕೆಂಗೇರಿ ಬಳಿ ರಸ್ತೆಗಳಲ್ಲಿ ನೀರು ತುಂಬಿ ಸಂಚಾರಕ್ಕೆ ಅಡ್ಡಿಯಾಗಿತ್ತುಮ ಕೆಂಗೇರಿ ಸಂಚಾರ ಠಾಣೆ ಪೊಲೀಸರು ರಸ್ತೆ ಸ್ವಚ್ಛ ಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.