Tap to Read ➤

ತಾಯಂದಿರ ದಿನದ ಆಚರಣೆ ಆರಂಭವಾಗಿದ್ದು ಹೇಗೆ ಎಂಬುದನ್ನು ತಿಳಿದುಕೊಳ್ಳಿ,

ಪದಗಳಿಗೆ ನಿಲುಕದ ವ್ಯಕ್ತಿತ್ವ ತಾಯಿ. ಆಸರೆಯ ಆಲದ ಮರವಾಗಿರುವ ತಾಯಂದಿರ ದಿನದ ಆಚರಣೆಯ ಹಿನ್ನಲೆಯನ್ನು ತಿಳಿದುಕೊಳ್ಳೋಣ ಬನ್ನಿ,
ಪ್ರತಿ ವರ್ಷ ಮೇ ತಿಂಗಳ 2 ನೇ ಭಾನುವಾರದಂದು ಆಚರಿಸಲಾಗುತ್ತದೆ.
ಮೊದಲ ಬಾರಿಗೆ ಅಮೆರಿಕಾದಲ್ಲಿ 1908ರಲ್ಲಿ ತಾಯಂದಿರ ದಿನ ಆಚರಿಸಲು ಪ್ರಾರಂಭಿಸಲಾಯಿತು.
ಅಮೆರಿಕದ ಶಾಂತಿ ಕಾರ್ಯಕರ್ತೆ  ಅನಾ ಜಾರ್ವಿಸ್ ಅವರು ತಾಯಿಯನ್ನು ನೆನೆಯಲು ಈ ದಿನವನ್ನು ಆಯ್ಕೆ ಮಾಡಿಕೊಂಡಿದ್ದರು.
ನಂತರದಲ್ಲಿ ಅಮೆರಿಕದ ರಾಷ್ಟ್ರಪತಿ ಆಗಿದ್ದ ವುಡ್ರೋ ವಿಲ್ಸನ್ ಮೇ 9, 1914ರಂದು ಪ್ರತಿ ವರ್ಷ ಮೇ 2ನೇ ಭಾನುವಾರದಂದು ತಾಯಂದಿರ ದಿನ ಆಚರಿಸಲಾಗುವುದು ಎಂದು ಕಾನೂನನ್ನು ಜಾರಿಗೊಳಿಸಿದರು
ಈ ಕಾನೂನು ಜಾರಿ ಮಾಡಿದ ನಂತರ ಅಮೆರಿಕ, ಭಾರತ ಹಾಗೂ ಹಲವು ದೇಶಗಳಲ್ಲಿ ಮೇ ತಿಂಗಳ 2ನೇ ಭಾನುವಾರದಂದು ತಾಯಂದಿರ ದಿನವನ್ನು ಆಚರಿಸಲಾಗುತ್ತದೆ.
ಬೇರೆ ದೇಶಗಳಲ್ಲಿ ತಾಯಂದಿರ ದಿನವನ್ನು ಬೆರೆ ಬೆರೆ ದಿನ ಆಚರಿಸಲಾಗುತ್ತದೆ. ಲಂಡನ್‍ನಲ್ಲಿ ಮಾರ್ಚ್ ತಿಂಗಳ ನಾಲ್ಕನೇ ಭಾನುವಾರದಂದು ಆಚರಿಸಲಾಗುತ್ತದೆ.
ಗ್ರೀಸ್ ದೇಶದಲ್ಲಿ ಫೆಬ್ರವರಿ 2ರಂದು ಆಚರಿಸಲಾಗುತ್ತದೆ.
ಭಾರತ ಸೇರಿ ಹಲವಾರು ದೇಶಗಳಲ್ಲಿ ಪ್ರತಿ ವರ್ಷ ಮೇ ತಿಂಗಳ 2ನೇ ಭಾನುವಾರದಂದು ತಾಯಂದಿರ ದಿನ ಆಚರಿಸಲಾಗುತ್ತದೆ. ಈ ವರ್ಷ ಮೇ 8ರಂದು ತಾಯಂದಿರ ದಿನ ಆಚರಿಸಲಾಗುತ್ತದೆ.
ಪೂರಕ ಓದಿಗಾಗಿ