Tap to Read ➤

ಕಟೀಲು ಜಾತ್ರೆ ವಿಶೇಷ;  ಗ್ರಾಮಸ್ಥರ ನಡುವೆ ಬೆಂಕಿಯ ಭೀಕರ ಕಾದಾಟ

ಅತ್ತೂರು ಮತ್ತು ಕೊಡೆತ್ತೂರು ಗ್ರಾಮಸ್ಥರ ಬೆಂಕಿ ಕಾದಾಟದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ಜಾತ್ರೆ ಸಂಪನ್ನಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಹುಪಾಲು ಜನರ ಆರಾಧ್ಯ ದೇವತೆಯಾದ ಕಟೀಲು ಶ್ರೀ ದುರ್ಗಾಪರಮೇಶ್ವರಿಗೆ ಹೇಳಿಕೊಂಡಿರುವ ಹರಕೆ.
2 ಗ್ರಾಮಸ್ಥರ ನಡುವೆ ಬೆಂಕಿಯ ಭೀಕರ ಕಾದಾಟ; ಇದು ಕಟೀಲು ಜಾತ್ರೆಯ 'ತೂಟೆದಾರ'ದ ವಿಶೇಷ
ಅತ್ತೂರು ಮತ್ತು ಕೊಡೆತ್ತೂರು ಎಂಬ ಎರಡೂ ಗ್ರಾಮದ ಜನರು ಎದುರೆದುರಾಗಿ ನಿಂತು ಬೆಂಕಿಯ ಜ್ವಾಲೆಗಳಿರುವ ದೀವಟಿಗೆಯನ್ನು ಒಬ್ಬರಿಗೊಬ್ಬರು ಎಸೆಯುತ್ತಾರೆ.
ಪ್ರತೀ ವರ್ಷ ನಡೆಯುವ ಕಟೀಲು ಶ್ರೀದುರ್ಗೆಯ ಜಾತ್ರೆಯ ಕೊನೆಯ ದಿನ ದೇವಿಯ ಅವಭೃತ ಸ್ನಾನ ನಡೆಯುತ್ತದೆ.
ಜಾತ್ರೆ ಸಂದರ್ಭದಲ್ಲಿ ಮಾತ್ರ ನಡೆಯುವ ಹರಕೆಯ ರೂಪದ ಈ ಕೊಳ್ಳಿಯ ಹೋರಾಟದಲ್ಲಿ ಭಾಗವಹಿಸುವ ಎರಡೂ ತಂಡಗಳಿಗೆ ದೇವರ ಅವಭೃತದ ಬಳಿಕ ಪ್ರಸಾದ ನೀಡಲಾಗುತ್ತದೆ.
ಬೆಂಕಿಯನ್ನು ಎಸೆಯುವಾಗ ಇವರಲ್ಲಿರುವ ಕೋಪಾವೇಶ ಈ ಆಟ ಮುಗಿದ ಬಳಿಕ ಇರುವುದಿಲ್ಲ. ಎಲ್ಲರೂ ಒಂದಾಗಿ ದೇವರ ದರ್ಶನ ಮಾಡಿ ಜೊತೆಯಾಗಿ ತಮ್ಮ ಗ್ರಾಮಗಳಿಗೆ ತೆರಳುತ್ತಾರೆ.
ಇದೊಂದು ಸಾಂಕೇತಿಕ ಹೋರಾಟವಾಗಿದ್ದರೂ, ಈ ಸಂದರ್ಭದಲ್ಲಿ ಮಾತ್ರ ಆವೇಶದಿಂದ ನೈಜ ವೈರಿಗಳ ಥರ ಹೋರಾಟ ನಡೆಸುತ್ತಾರೆ. ಕೆಲವೊಮ್ಮೆ ಇದು ಅತಿರೇಕಕ್ಕೆ ಹೋಗುವುದೂ ಇದೆ.
ಈ ಆಟ ಆಡಲು ಎಲ್ಲರಿಗೂ ಅವಕಾಶ ಇಲ್ಲ. ಅತ್ತೂರು ಮತ್ತು ಕೊಡೆತ್ತೂರು ಎಂಬ ಎರಡು ಗ್ರಾಮದ ಜನರಿಗೆ ಮಾತ್ರ ಅವಕಾಶ ಇದೆ.
ಹೆಚ್ಚಿನ ಮಾಹಿತಿಗಾಗಿ