Tap to Read ➤

ಭಾರತದ ಹೊಸ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ

ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕವಾಗಿದ್ದಾರೆ.
ಜನರಲ್ ಮನೋಜ್ ಮುಕುಂದ್ ನರವಣೆ ಅವರ 28 ತಿಂಗಳ ಅಧಿಕಾರಾವಧಿ ಏಪ್ರಿಲ್ 30ಕ್ಕೆ ಕೊನೆಗೊಳ್ಳುವ ಹಿನ್ನೆಲೆಯಲ್ಲಿ ಮನೋಜ್ ಪಾಂಡೆ ಅವರ ನೇಮಕ ಮಾಡಲಾಗಿದೆ.
ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅತ್ಯಂತ ಹಿರಿಯ ಸೇನಾಧಿಕಾರಿ
ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರು ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ವಲಯಗಳಲ್ಲಿ ನೈಜ ನಿಯಂತ್ರಣ ರೇಖೆಯನ್ನು (ಎಲ್‌ಎಸಿ) ಕಾಪಾಡುವ ಪೂರ್ವ ಸೇನಾ ಕಮಾಂಡ್‌ನ ಮುಖ್ಯಸ್ಥರಾಗಿದ್ದರು.
ಜೂನ್ 2020 ರಿಂದ ಮೇ 2021 ರವರೆಗೆ ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್ (CINCAN)ನ ಕಮಾಂಡರ್-ಇನ್-ಚೀಫ್ ಆಗಿದ್ದರು.
IMAಯಿಂದ ಉತ್ತೀರ್ಣರಾದ ನಂತರ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ಡಿಸೆಂಬರ್ 1982 ರಲ್ಲಿ ಕಾರ್ಪ್ಸ್ ಆಫ್ ಇಂಜಿನಿಯರ್ಸ್‌ಗೆ ನಿಯೋಜಿಸಲಾಯಿತು.
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಪಲ್ಲನ್‌ವಾಲಾ ಸೆಕ್ಟರ್‌ನಲ್ಲಿ ಆಪರೇಷನ್ ಪರಾಕ್ರಮ್ ಸಮಯದಲ್ಲಿ ಇಂಜಿನಿಯರ್ ರೆಜಿಮೆಂಟ್‌ ಮುಖ್ಯಸ್ಥರಾಗಿದ್ದರು.
ಹೆಚ್ಚಿನ ಮಾಹಿತಿಗಾಗಿ