Tap to Read ➤

ದೆಹಲಿಯಲ್ಲಿ ಬೆಂಕಿ ಅವಘಡ: 27 ಸಜೀವ ದಹನ

ರಾಜಧಾನಿ ದೆಹಲಿಯಲ್ಲಿ ಭಯಾನಕ ಅಗ್ನಿ ಅನಾಹುತ ಸಂಭವಿಸಿದ್ದು,3 ಅಂತಸ್ತಿನ ಕಟ್ಟಡ ಧಗಧಗನೆ ಹೊತ್ತಿ ಉರಿದು 27 ಜನರು ಸಜೀವ ದಹನವಾಗಿದ್ದಾರೆ.
ಮುಂಡ್ಕಾ ಮೆಟ್ರೋ ನಿಲ್ದಾಣದ ಸಮೀಪದಲ್ಲಿರುವ ಕಟ್ಟಡಕ್ಕೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಕಾರ್ಯಪ್ರವೃತ್ತರಾಗಿದ್ದಾರೆ.
ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 27 ಜನರು ಸಜೀವವಾಗಿ ದಹನವಾಗಿದ್ದಾರೆ. ಘಟನೆಯಲ್ಲಿ 70 ಜನರನ್ನು ರಕ್ಷಿಸಲಾಗಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಟ್ಟಡದ ಮಾಲಿಕರಾದ ಹರೀಶ್‌ ಗೋಯಲ್‌ ಮತ್ತು ವರುಣ್‌ ಗೋಯಲ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಸಿಸಿಟಿವಿ ಮತ್ತು ರೂಟರ್‌ಗಳನ್ನು ಉತ್ಪಾದಿಸುವ ಕಂಪನಿಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಎಲ್ಲಾ ಮಹಡಿಗಳಿಗೂ ಹಬ್ಬಿ ಭಾರೀ ದುರ್ಘಟನೆ ಸಂಭವಿಸಿದೆ
ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ಮಂತ್ರಿ ಮೋದಿ, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮೊದಲಾದ ಗಣ್ಯರು ಕಂಬನಿ ಮಿಡಿದಿದ್ದಾರೆ.
ಘಟನೆಯಲ್ಲಿ ಮಡಿದವರ ಕುಟುಂಬಕ್ಕೆ ತಲಾ 2 ಲಕ್ಷ ರು. ಮತ್ತು ಗಾಯಾಳುಗಳ ಕುಟುಂಬಕ್ಕೆ ಪ್ರಧಾನಿ ಮೋದಿ ತಲಾ 50000 ರು. ಪರಿಹಾರ ಘೋಷಿಸಿದ್ದಾರೆ.
for More Stories