Tap to Read ➤

ಮೇ 11ರ ರಾಷ್ಟ್ರೀಯ ತಂತ್ರಜ್ಞಾನ ದಿನದ ವಿಶೇಷತೆ, ಇತಿಹಾಸ, ಮಹತ್ವ

ಈ ದಿನವು ದೇಶದಲ್ಲಿ ಮಹತ್ವದ ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿದ್ದು, ಪರಮಾಣು ಶಸ್ತ್ರಾಸ್ತ್ರಗಳನ್ನು ಯಶಸ್ವಿಯಾಗಿ ಪರೀಕ್ಷಿಸಿದ ಹಿನ್ನಲೆಯಲ್ಲಿ ಈ ದಿನವನ್ನು ಭಾರತದ ತಾಂತ್ರಿಕ ಪ್ರಗತಿಯ ಮೈಲುಗಲ್ಲು ಎಂದು ಪರಿಗಣಿಸಲಾಗಿದೆ.
1998ರ ಮೇ 11 ರಂದು ರಾಜಸ್ಥಾನದ ಪೋಖ್ರಾನ್‌ನಲ್ಲಿ ಭಾರತ ಸರ್ಕಾರ ಪರಮಾಣು ಶಸ್ತ್ರಾಸ್ತ್ರಗಳನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿತ್ತು.
ಪ್ರತಿ ವರ್ಷ ಈ ದಿನದಂದು ಭಾರತೀಯ ವಿಜ್ಞಾನಿಗಳ ಗಮನಾರ್ಹ ಶ್ರಮ ಮತ್ತು ಸಾಧನೆಗಳನ್ನು ಗೌರವಿಸಲು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ.
1998ರಲ್ಲಿ ಪೋಖ್ರಾನ್‌ನಲ್ಲಿ ಪರಮಾಣು ಪರೀಕ್ಷೆಗಳನ್ನು ಯಶಸ್ವಿಯಾಗಿದ್ದಕ್ಕೆ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಈ ದಿನವನ್ನು ಮಹತ್ವದ ಸಾಧನೆಯ ದಿನವೆಂದು ಘೋಷಿಸಿದರು.
ಪ್ರತಿ ವರ್ಷ, ತಂತ್ರಜ್ಞಾನ ಅಭಿವೃದ್ಧಿ ಮಂಡಳಿ (TDB) ಮೂರು ವಿಭಾಗಗಳಲ್ಲಿ ರಾಷ್ಟ್ರೀಯ ಪ್ರಶಸ್ತಿಗಳನ್ನು ಘೋಷಿಸುತ್ತದೆ.
MSME ಪ್ರಶಸ್ತಿಗಳು ಮತ್ತು ಸ್ಟಾರ್ಟ್ಅಪ್ ಪ್ರಶಸ್ತಿಗಳ ಅಡಿಯಲ್ಲಿ ತಂತ್ರಜ್ಞಾನಗಳ ವಾಣಿಜ್ಯೀಕರಣಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ.
ಹೊಸ ಸ್ವದೇಶಿ ತಂತ್ರಜ್ಞಾನದ ಮೂಲಕ ವಾಣಿಜ್ಯೀಕರಣ ಮತ್ತು ಕೈಗಾರಿಕೆಗಳಲ್ಲಿ ಯಶಸ್ವಿಯಾದವರಿಗೆ ಈ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ.
ರಾಷ್ಟ್ರೀಯ ತಂತ್ರಜ್ಞಾನದ ದಿನದ 2022ರ ಗುರಿಯು "ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಯೋಜಿತ ವಿಧಾನ"ವಾಗಿದೆ.
More Web Stories