Tap to Read ➤

ಮಾಜಿ ಸಚಿವ ನವಜೋತ್ ಸಿಧು ಜೈಲುವಾಸ ಏಕೆ?

ನವಜೋತ್ ಸಿಂಗ್ ಸಿಧುಗೆ ಸುಪ್ರೀಂಕೋರ್ಟ್‌ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪುನೀಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
Shivam Muradimath
ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದ ಹಿನ್ನೆಲೆಯಲ್ಲಿ ಮಾಜಿ ಸಚಿವ ನವಜೋತ್ ಸಿಂಗ್ ಸಿಧುಗೆ ಸುಪ್ರೀಂಕೋರ್ಟ್‌ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.
ಸಿಧು ಪಟಿಯಾಲದಲ್ಲಿ ವೃದ್ದನ ಮೇಲೆ ಹಲ್ಲೆ ಮಾಡಿದ್ದರು. ಚಿಕಿತ್ಸೆ ಫಲಿಸದ ಕಾರಣ ವೃದ್ದ ಸಾವನ್ನಪ್ಪಿದರು ಈ ಪ್ರಕರಣಕ್ಕೆ ಸಂಭಂದಿಸಿದಂತೆ ಕೋರ್ಟ ಆದೇಶ ನೀಡಿತ್ತು.
ಜೈಲು ಶಿಕ್ಷೆ ತೀರ್ಪು ನೀಡಿದ ಬೆನ್ನಲ್ಲೆ ಸಿಧು ಅನಾರೋಗ್ಯದ ಕಾರಣ ನೀಡಿ ಕೆಲವು ವಾರಗಳ ಗಡವು ಕೇಳಿಕೊಂಡಿದ್ದಾರೆ .
ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಲಾವಕಾಶ ನೀಡುವಂತೆ ಸಿಧು ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.
ಅಪರಾಧಕ್ಕೆ 34 ವರ್ಷಗಳು ಕಳೆದಿವೆ, ತೀರ್ಪು ಬಂದ ಕೂಡಲೆ ವಾಯ್ದೆ ಕೇಳುತ್ತಿದ್ದಾರೆ ಎಂದು ಸರ್ಕಾರಿ ವಕೀಲ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ತೀರ್ಪು ನೀಡಿದ ಹಿನ್ನೆಲೆಯಲ್ಲಿ ಸಿಧು, ಕಾನೂನಿನ ಸಾರ್ವಭೌಮತೆಗೆ ನಾನು ಶರಣಾಗುತ್ತೇನೆ ಎಂದು ಟ್ವೀಟ್ ಮಾಡಿದ್ದರು.
More Stories