Tap to Read ➤

ಟೊಮೇಟೋ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳು

ಕೇರಳದಲ್ಲಿ ಪತ್ತೆಯಾಗಿರುವ ಹೊಸ ಸೋಂಕು ಟೋಮೆಟೋ ರೋಗ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದು ಪಾಲಕರನ್ನು ಆತಂಕಕ್ಕೆ ಒಳಪಡಿಸಿದೆ. ಸೋಂಕು ಹರಡುದಂತೆ ಈ ಮುನ್ನೆಚ್ಚರಿಕೆ ಕ್ರಮಗಳು ಇಲ್ಲಿವೆ.
Shivam Muradimath
* ನಿಮ್ಮ ಮಗುವಿನಲ್ಲಿ ರೋಗದ ಲಕ್ಷಣಗಳು ಕಂಡು ಬರುತ್ತಿದ್ದಂತೆ ವೈದ್ಯರನ್ನು ಸಂಪರ್ಕಿಸಬೇಕು
* ಸೋಂಕಿತ ಮಕ್ಕಳಿಗೆ ಹೆಚ್ಚು ಹೆಚ್ಚು ಕುದಿಸಿದ ನೀರನ್ನು ಕುಡಿಸುವ ಮೂಲಕ ನೀರಿನಂಶವನ್ನು ಕಾಪಾಡಿಕೊಳ್ಳಬೇಕು
* ಗುಳ್ಳೆಗಳು ಅಥವಾ ದದ್ದುಗಳನ್ನು ತುರಿಸುವುದು ಅಥವಾ ಒಡೆದುಕೊಳ್ಳದಂತೆ ನೋಡಿಕೊಳ್ಳಬೇಕು
* ಸರಿಯಾದ ರೀತಿಯಲ್ಲಿ ಶುಚಿತ್ವ ಮತ್ತು ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಬೇಕು
* ಬಿಸಿ ನೀರಿನಲ್ಲಿಯೇ ಸ್ನಾನ ಮಾಡುವುದು
* ಟೊಮೇಟೋ ಜ್ವರದ ಸೋಂಕಿತ ವ್ಯಕ್ತಿಯೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಬೇಕು
* ಜ್ವರದ ದೀರ್ಘಕಾಲೀನ ಪರಿಣಾಮಗಳನ್ನು ತಪ್ಪಿಸಲು ಸರಿಯಾಗಿ ವಿಶ್ರಾಂತಿ ತೆಗೆದುಕೊಳ್ಳಬೇಕು.
More Updates