keyboard_backspace

Explained: ಪೆಗಾಸಸ್ ಬೇಹುಗಾರಿಕೆ ಬಗ್ಗೆ ತನಿಖೆ ಆರಂಭಿಸಿದ ರಾಷ್ಟ್ರಗಳು

Google Oneindia Kannada News

ನವದೆಹಲಿ, ಅಕ್ಟೋಬರ್ 28: ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ರಾಜಕಾರಣಿಗಳು, ಪತ್ರಕರ್ತರು ಮತ್ತು ಕಾರ್ಯಕರ್ತರ ಮೇಲೆ ಕಣ್ಗಾವಲು ಇರಿಸಲಾಗಿದೆ ಎಂಬ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸಿದ ಮೂರು ತಿಂಗಳ ನಂತರ ಭಾರತದಲ್ಲಿ ಈ ಬಗ್ಗೆ ಭಾರತದಲ್ಲಿ ತನಿಖೆ ಆರಂಭಿಸಲಾಗಿದೆ.

ಕಳೆದ 2021ರ ಜುಲೈ ತಿಂಗಳಿನಲ್ಲಿ ಅಂತಾರಾಷ್ಟ್ರೀಯ ಮಾಧ್ಯಮಗಳು ಪೆಗಾಸಸ್ ಬೇಹುಗಾರಿಕೆಗೆ ಸಂಬಂಧಿಸಿದಂತೆ ವರದಿ ಪ್ರಕಟಿಸಿದವು. ಮಾಹಿತಿ ಸೋರಿಕೆ ಬಗ್ಗೆ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಫ್ರಾನ್ಸ್ ಮತ್ತು ಹಂಗೇರಿ ಸೇರಿ ಹಲವಾರು ರಾಷ್ಟ್ರಗಳು ತನಿಖೆ ಶುರು ಮಾಡಿವೆ.

ಪೆಗಾಸಸ್‌ ತನಿಖೆಗೆ ಸುಪ್ರೀಂ ಸಮಿತಿ ರಚನೆ: 'ರಾಷ್ಟ್ರಕ್ಕಿಂತ ಪ್ರಧಾನಿ ಮೇಲಲ್ಲ' ಎಂದ ರಾಹುಲ್‌ಪೆಗಾಸಸ್‌ ತನಿಖೆಗೆ ಸುಪ್ರೀಂ ಸಮಿತಿ ರಚನೆ: 'ರಾಷ್ಟ್ರಕ್ಕಿಂತ ಪ್ರಧಾನಿ ಮೇಲಲ್ಲ' ಎಂದ ರಾಹುಲ್‌

ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶ ಬಳಸಿಕೊಂಡು ಬೇಹುಗಾರಿಕೆ ನಡೆಸಿರುವ ಪ್ರಕರಣ ಸಂಬಂಧ ತ್ವರಿತವಾಗಿ ತನಿಖೆ ನಡೆಸುವುದಕ್ಕೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್ ವಿ ರವೀಂದ್ರನ್ ನೇತೃತ್ವದ ಸಮಿತಿಯನ್ನು ರಚಿಸಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದೆ. ವ್ಯಕ್ತಿಗಳ ಮೇಲೆ ವಿವೇಚನಾರಹಿತ ಬೇಹುಗಾರಿಕೆ ನಡೆಸುವುದಕ್ಕೆ ಅನುಮತಿಸಲಾಗುವುದಿಲ್ಲ ಎಂದು ಕೋರ್ಟ್ ಹೇಳಿದೆ. ಪೆಗಾಸಸ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತವಾಗಿ ತನಿಖೆ ನಡೆಸಿ 8 ವಾರಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಆರ್‌ವಿ ರವೀಂದ್ರನ್ ನೇತೃತ್ವದ ತಜ್ಞರ ಸಮಿತಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಪೆಗಾಸಸ್ ಕುರಿತು ತನಿಖೆ ನಡೆಸುತ್ತಿರುವ ರಾಷ್ಟ್ರಗಳು

ಪೆಗಾಸಸ್ ಕುರಿತು ತನಿಖೆ ನಡೆಸುತ್ತಿರುವ ರಾಷ್ಟ್ರಗಳು

ಇಸ್ರೇಲ್ ಮೂಲದ ಪೆಗಾಸಸ್ ಎಂಬ ಎನ್ಎಸ್ಓ ಕಂಪನಿಗೆ 10 ರಾಷ್ಟ್ರಗಳ ಸರ್ಕಾರಗಳು ಗ್ರಾಹಕರಾಗಿ ಸಂಖ್ಯೆ ನೊಂದಾಯಿಸಿರುವ ಬಗ್ಗೆ ಅಂದಾಜಿಸಲಾಗಿದೆ. ಅಜೆರ್ಬೈಜಾನ್, ಬಹ್ರೇನ್, ಕಜಕಿಸ್ತಾನ್, ಮೆಕ್ಸಿಕೋ, ಮೊರಾಕೊ, ರುವಾಂಡಾ, ಸೌದಿ ಅರೇಬಿಯಾ, ಹಂಗೇರಿ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ರಾಷ್ಚ್ರಗಳು ಈ ಪಟ್ಟಿಯಲ್ಲಿ ಗುರುತಿಸಿಕೊಂಡಿವೆ. ಇದರೊಂದಿಗೆ ಆಯ್ಕೆ ಮಾಡಲಾದ ಫೋನ್ ಸಂಖ್ಯೆಗಳು ನಾಲ್ಕು ಖಂಡಗಳ 45ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ವ್ಯಾಪಿಸಿರುವುದು ಗೊತ್ತಾಗಿದೆ.

ಪೆಗಾಸಸ್ ಬೇಹುಗಾರಿಕೆ ಪ್ರಕರಣದ ಹಿನ್ನೆಲೆ

ಪೆಗಾಸಸ್ ಬೇಹುಗಾರಿಕೆ ಪ್ರಕರಣದ ಹಿನ್ನೆಲೆ

ಜಾಗತಿಕ ತನಿಖಾ ಸಂಸ್ಥೆಗಳು ಮಾಡಿರುವ ವರದಿಯ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಮಾರಾಟವಾಗಿರುವ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶವನ್ನು ಬಳಸಿಕೊಂಡು ವಿರೋಧ ಪಕ್ಷದ ಹಲವು ನಾಯಕರ ಮೇಲೆ ಕಣ್ಗಾವಲು ಇಡಲಾಗಿದೆ. ದೇಶದ ಪ್ರಮುಖ 142ಕ್ಕೂ ಹೆಚ್ಚು ರಾಜಕೀಯ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿಯ ಬಗ್ಗೆ ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಅಲ್ಲದೇ, ದೇಶದ 300ಕ್ಕೂ ಹೆಚ್ಚು ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಸ್ವತಃ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.

ಪೆಗಾಸಸ್ ಬೇಹುಗಾರಿಕೆ ಬಗ್ಗೆ ಜಾಗತಿಕ ಸಂಸ್ಥೆಗಳ ಸುದ್ದಿ

ಪೆಗಾಸಸ್ ಬೇಹುಗಾರಿಕೆ ಬಗ್ಗೆ ಜಾಗತಿಕ ಸಂಸ್ಥೆಗಳ ಸುದ್ದಿ

ಜಾಗತಿಕ ಸುದ್ದಿ ಸಂಸ್ಥೆಗಳಾಗಿರುವ ವಾಶಿಂಗ್ಟನ್ ಪೋಸ್ಟ್, ದಿ ಗಾರ್ಡಿಯನ್, ಲೇ ಮೊಂಡೆ ಜೊತೆ ಸಹಯೋಗ ಹೊಂದಿರುವ 'ದಿ ವೈರ್' ಪೆಗಾಸಸ್ ಬೇಹುಗಾರಿಕೆ ಕುರಿತು ವಿಸ್ತೃತ ವರದಿಯನ್ನು ಪ್ರಕಟಿಸಿತ್ತು. ಮಾಧ್ಯಮ ಪಾಲುದಾರ ಸಂಸ್ಥೆ ಆಗಿರುವ ಪ್ಯಾರಿಸ್ ಮೂಲದ 'ನಾನ್ ಪ್ರಾಫಿಟ್ ಆರ್ಗನೈಸೇಷನ್ ಫಾರ್ಬಿಡನ್ ಸ್ಟೋರೀಸ್ ಮತ್ತು ರೈಟ್ಸ್ ಗ್ರೂಪ್ ಅಮ್ನೆಸ್ಟಿ ಇಂಟರ್ ನ್ಯಾಷನಲ್' ಸಂಸ್ಥೆಗಳು ಈ ಕುರಿತು ತನಿಖೆ ನಡೆಸಿದ್ದವು ಎಂದು ವರದಿಯಲ್ಲಿ ಉಲ್ಲೇಖಿಸಿವೆ. ಇಸ್ರೇಲ್ ಕಣ್ಗಾವಲು ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಜಗತ್ತಿನಾದ್ಯಂತ ಸಾವಿರಾರು ಗಣ್ಯರ ಮೊಬೈಲ್ ಸಂಖ್ಯೆಯನ್ನು ಕದಿಯಲಾಗಿದೆ ಎಂದು ತನಿಖಾ ವರದಿಯಿಂದ ಗೊತ್ತಾಗಿದೆ. ವಿಶ್ವದಲ್ಲಿ ಒಟ್ಟು 50,000ಕ್ಕೂ ಅಧಿಕ ಮೊಬೈಲ್ ಸಂಖ್ಯೆಗಳನ್ನು ಕದ್ದುಕೊಳ್ಳಲಾಗಿದೆ ಎಂದು ತಿಳಿದು ಬಂದಿತ್ತು.

ಪೆಗಾಸಸ್ ಬೇಹುಗಾರಿಕೆ ಬಗ್ಗೆ ಫ್ರಾನ್ಸ್ ತನಿಖೆ

ಪೆಗಾಸಸ್ ಬೇಹುಗಾರಿಕೆ ಬಗ್ಗೆ ಫ್ರಾನ್ಸ್ ತನಿಖೆ

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರ ಹೆಸರು ಬೇಹುಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಕಾಣಸಿಕೊಂಡಿತ್ತು. ಪ್ರಧಾನಿ ಮ್ಯಾಕ್ರನ್ ಸಂಪುಟದ ಮಾಜಿ ಸಚಿವರ ಫೋನ್ ಸಂಖ್ಯೆಗಳು ಸೋರಿಕೆಯಾದ ಮಾಹಿತಿಯ ಒಂದು ಭಾಗವಾಗಿತ್ತು. ಇದರ ಬೆನ್ನಲ್ಲೇ ಪೆಗಾಸಸ್ ಬೇಹುಗಾರಿಕೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿದ ಮೊದಲ ಫ್ರಾನ್ಸ್ ಆಯಿತು. ತದನಂತರ ಆಗಸ್ಟ್‌ನಲ್ಲಿ ಮೂವರು ಪತ್ರಕರ್ತರ ಫೋನ್‌ಗಳ ಮೇಲೆ ಬೇಹುಗಾರಿಕೆ ನಡೆದಿರುವ ಬಗ್ಗೆ ಫ್ರೆಂಚ್ ತನಿಖಾಧಿಕಾರಿಗಳು ದೃಢಪಡಿಸಿದರು. ಫ್ರಾನ್ಸ್ 24 ಪತ್ರಕರ್ತರು, ಫ್ರೆಂಚ್ ತನಿಖಾ ವೆಬ್‌ಸೈಟ್ ಮೀಡಿಯಾಪಾರ್ಟ್‌ನ ತನಿಖಾ ಪತ್ರಕರ್ತ ಲೆನಾಗ್ ಬ್ರೆಡೌಕ್ಸ್ ಮತ್ತು ಸೈಟ್‌ನ ನಿರ್ದೇಶಕ ಎಡ್ವಿ ಪ್ಲೆನೆಲ್ ಅವರ ಫೋನ್‌ಗಳಲ್ಲಿ ಪೆಗಾಸಸ್ ತಂತ್ರಾಂಶ ಪತ್ತೆಯಾಗಿದೆ ಎಂದು ದಿ ಗಾರ್ಡಿಯನ್ ವರದಿ ಮಾಡಿತ್ತು.

ಪೆಗಾಸಸ್ ವಿರುದ್ಧ ಹಂಗೇರಿಯಲ್ಲೂ ತನಿಖೆ

ಪೆಗಾಸಸ್ ವಿರುದ್ಧ ಹಂಗೇರಿಯಲ್ಲೂ ತನಿಖೆ

ಕಳೆದ ಜುಲೈ 22 ರಂದು, 300 ಕ್ಕೂ ಹೆಚ್ಚು ಹಂಗೇರಿಯನ್ ಪ್ರಜೆಗಳ ಫೋನ್‌ಗಳ ಮೇಲೆ ಬೇಹುಗಾರಿಕೆ ನಡೆಸಿರುವುದನ್ನು ತನಿಖಾ ಮಾಧ್ಯಮವು ಬಹಿರಂಗಪಡಿಸಿತ್ತು. ತದನಂತರ ಹಂಗೇರಿಯನ್ ಪ್ರಾಸಿಕ್ಯೂಟರ್‌ಗಳು ತನಿಖೆಯನ್ನು ಪ್ರಾರಂಭಿಸಿದರು. ಹಂಗೇರಿಯನ್ ವಿರೋಧ ಪಕ್ಷದ ಶಾಸಕರು ಮತ್ತು ಮಾಹಿತಿ ಹಕ್ಕುಗಳ ಕಾರ್ಯಕರ್ತರು ವಿಚಾರಣೆಗೆ ಕರೆ ನೀಡಿದರು, ಪ್ರಧಾನಮಂತ್ರಿ ವಿಕ್ಟರ್ ಓರ್ಬನ್ ಸರ್ಕಾರವು ಪತ್ರಕರ್ತರು, ರಾಜಕಾರಣಿಗಳು ಮತ್ತು ವ್ಯಾಪಾರ ವ್ಯಕ್ತಿಗಳ ಮೇಲೆ ಕಣ್ಣಿಡಲು ಪೆಗಾಸಸ್ ತಂತ್ರಾಂಶವನ್ನು ಬಳಸಿರಬಹುದು ಎಂದು ಆರೋಪಿಸಿದರು.

ಪೆಗಾಸಸ್ ತಂತ್ರಾಂಶಕ್ಕೆ ಇಸ್ರೇಲ್ ಮೂಲ ನೆಲೆ

ಪೆಗಾಸಸ್ ತಂತ್ರಾಂಶಕ್ಕೆ ಇಸ್ರೇಲ್ ಮೂಲ ನೆಲೆ

ಪೆಗಾಸಸ್ ಬೇಹುಗಾರಿಕೆ ತಂತ್ರಾಂಶಕ್ಕೆ ಸಂಬಂಧಿಸಿದಂತೆ NSO ಗ್ರೂಪ್ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಇಸ್ರೇಲ್ ಅಂತರ್-ಸಚಿವಾಲಯದ ತಂಡವನ್ನು ಸ್ಥಾಪಿಸಿತು. ಹಲವಾರು ಸಂಸ್ಥೆಗಳ ಪ್ರತಿನಿಧಿಗಳು ಜುಲೈನಲ್ಲಿ NSO ಕಚೇರಿಗೆ ಭೇಟಿ ನೀಡಿದರು. ಸೈಬರ್ ಉತ್ಪನ್ನಗಳನ್ನು ರಫ್ತು ಮಾಡಲು "ಪರವಾನಗಿಗಳನ್ನು ನೀಡುವ ಸಂಪೂರ್ಣ ವಿಷಯದ ಪರಿಶೀಲನೆ" ಯ ಬಗ್ಗೆ ಸರ್ಕಾರವು ಸುಳಿವು ನೀಡಿತ್ತು.

English summary
Which Nations Are Probing The Pegasus Spyware Issue Apart From India. Know More.
Related News
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X