• search
  • Live TV
keyboard_backspace

110 ಠಾಣೆಗಳಲ್ಲಿ ಮಹಿಳಾ ಸಹಾಯ ಕೇಂದ್ರ : ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು, ಜನವರಿ 27: ಬೆಂಗಳೂರಿನ ಮಹಿಳೆಯರಿಗೆ ಸಂತಸದ ಸುದ್ದಿ. ಪೊಲೀಸ್ ಠಾಣೆಗೆ ಹೋಗುವ ಮಹಿಳೆಯರಿಗೆ ತುರ್ತು ನ್ಯಾಯ ಒದಗಿಸಲು ಮಹಿಳಾ ಪೊಲೀಸ್ ಸಿಬ್ಬಂದಿ ನೆರವಿಗೆ ಬರಲಿದ್ದಾರೆ. ನಿರ್ಭಯ ಯೋಜನೆ ಅಡಿ ಬೆಂಗಳೂರಿನ 110 ಪೊಲೀಸ್ ಠಾಣೆಗಳಲ್ಲಿ ಮಹಿಳಾ ಸಲಹಾ ಕೇಂದ್ರಗಳನ್ನು ತೆರೆಯಲು ಪೊಲೀಸ್ ಇಲಾಖೆ ಮುಂದಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರಕಟಿಸಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಗಲಭೆಗೆ ನಾಂದಿ ಹಾಡಿದ್ದ ಕೆ.ಜಿ ಹಳ್ಳಿ ಸಮೀಪದ ಗೋವಿಂದಪುರದಲ್ಲಿ ನೂತನ ಪೊಲೀಸ್ ಠಾಣೆ ಉದ್ಯಾಟಿಸಿದರು. ಇದೇ ವೇಳೆ ನಿರ್ಭಯ ಯೋಜನೆಯಡಿ ಮಹಿಳೆಯರ ಸುರಕ್ಷತೆಗಾಗಿ ಕೆ.ಜಿ. ಹಳ್ಳಿ ಪೊಲೀಸ್ ಠಾಣೆಯಲ್ಲಿ ತೆರೆದಿರುವ ಪ್ರಥಮ ಮಹಿಳಾ ಸಹಾಯ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಗೃಹ ಸಚಿವರು, ಮಹಿಳೆಯರ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಮಹಿಳೆಯರಿಗೆ ಏನೇ ಸಮಸ್ಯೆ ಇದ್ದರೂ ಮುಕ್ತವಾಗಿ ಹಂಚಿಕೊಳ್ಳಬೇಕು. ತ್ವರಿತ ನ್ಯಾಯ ಪಡೆಯಬೇಕು. ಹೀಗಾಗಿ ಮಹಿಳೆಯರಿಗೆ ಸ್ಪಂದಿಸಲೆಂದು ನಗರದ 110 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಹಿಳಾ ಸಲಹಾ ಕೇಂದ್ರಗಳನ್ನು ನಿರ್ಭಯ ಯೋಜನೆಯಡಿ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

ಠಾಣೆಗೆ ಬರುವ ಮಹಿಳೆಯರೊಂದಿಗೆ ಮುಕ್ತವಾಗಿ ಮಾತನಾಡಿ ಅವರಿಗೆ ತುರ್ತು ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ತರಬೇತಿ ಹೊಂದಿದ ಮಹಿಳಾ ಸಿಬ್ಬಂದಿಯನ್ನು ನಗರದ 26 ಪೊಲೀಸ್ ಠಾಣೆಗಳಿಗೆ ನಿಯೋಜಿಸಲಾಗಿದೆ. ಉಳಿದ 84 ಪೊಲೀಸ್ ಠಾಣೆಗಳಿಗೆ ಶೀಘ್ರದಲ್ಲಿಯೇ ನಿಯೋಜಿಸಲಾಗುತ್ತಿದೆ. ಹಂತ ಹಂತವಾಗಿ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಸಲಹಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಅವರು ತಿಳಿಸಿದರು.

ಸರ್ವಜ್ಞ ನಗರ ಶಾಸಕ ಕೆ.ಜೆ.ಜಾರ್ಜ್‌, ಸಂಸದ ಪಿ.ಸಿ. ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಕಮಲಪಂತ್, ಅಪರ ಪೊಲೀಸ್ ಆಯುಕ್ತ ಎಸ್‌. ಮುರುಗನ್, ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

English summary
110 women help centers will open in Bengaluru police stations under the scheme of Nirbhya, said home minister Basavaraja Bommai know more..
Related News
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X